ದೇಶದಲ್ಲೇ ಮೊದಲ ಚರ್ಮದ ಬ್ಲ್ಯಾಕ್ ಫಂಗಸ್ ಚಿತ್ರದುರ್ಗದಲ್ಲಿ ಪತ್ತೆ

ಚಿತ್ರದುರ್ಗ, ಜೂನ್ 1: ಕೊರೊನಾ ಸೋಂಕಿನ ನಂತರ ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್​, ಯೆಲ್ಲೋ ಫಂಗಸ್‌ನಂತಹ ನಾನಾ ಸೋಂಕಿನ ಸುಳಿಗೆ ಜನ ಸಿಲುಕುತ್ತಿದ್ದು, ಈಗ ಚರ್ಮ ಫಂಗಸ್‌ನ್ನು ಎದುರಿಸುವಂತಾಗಿದೆ.

ಕೋಟೆನಾಡು ಚಿತ್ರದುರ್ಗದಲ್ಲಿ ದೇಶದ ಮೊದಲ ಚರ್ಮದ ಬ್ಲ್ಯಾಕ್ ಫಂಗಸ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಚಿತ್ರದುರ್ಗದ 54 ವರ್ಷದ ರೋಗಿಯಲ್ಲಿ ಸ್ಕಿನ್ ಮ್ಯೂಕರ್ ಮೈಕೋಸಿಸ್ ಪತ್ತೆಯಾಗಿದೆ ಎಂದು ಇಎನ್‌ಟಿ ತಜ್ಞ ಡಾ.ಪ್ರಹ್ಲಾದ್ ತಿಳಿಸಿದ್ದಾರೆ.

 Indias First Black Fungus Found On Skin In Coronavirus Patient Reported In Chitradurga

54 ವರ್ಷದ ಪಂಚಾಕ್ಷರಪ್ಪ ಒಂದು‌ ತಿಂಗಳ ಹಿಂದೆ ಕೋವಿಡ್ ಸೋಂಕಿನಿಂದ ಗುಣಮುಖನಾಗಿ ಚೇತರಿಸಿಕೊಳ್ಳುತ್ತಿದ್ದ, ಮಧುಮೇಹದಿಂದ ಬಳಲುತ್ತಿದ್ದ ಈ ವ್ಯಕ್ತಿಯ ಬಲ ಕಿವಿಯ ಪಕ್ಕದಲ್ಲಿ ಚರ್ಮದ ಕಪ್ಪು ಶಿಲೀಂದ್ರ ರೋಗ ಪತ್ತೆಯಾಗಿದೆ.

 Indias First Black Fungus Found On Skin In Coronavirus Patient Reported In Chitradurga

ದೇಶದಲ್ಲೇ ಪ್ರಥಮ ಚರ್ಮದ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದು ಕಿವಿ, ಮೂಗು ಮತ್ತು ಗಂಟಲು (ಇಎನ್​ಟಿ) ತಜ್ಞ ಡಾ.ಎನ್.ಬಿ ಪ್ರಹ್ಲಾದ್ ಮಾಹಿತಿ ನೀಡಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖವಾಗುತ್ತಿದ್ದ ವ್ಯಕ್ತಿಗೆ ಹೊಸದಾಗಿ ಚರ್ಮದ ಮೇಲೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ.

Recommended Video

      ಪ್ರಪಂಚದಲ್ಲೇ ಮೊದಲ ಬಾರಿಗೆ ಮಾನವನ ದೇಹದಲ್ಲಿ ಕಾಣಿಸಿಕೊಂಡ H10N3 ವೈರಸ್ | Oneindia Kannada

      ಕರ್ನಾಟಕ ಇಎನ್​ಟಿ ಆಸ್ಪತ್ರೆಯಲ್ಲಿ ಈ ಬ್ಲ್ಯಾಕ್ ಫಂಗಸ್​ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದುಡಾ.ಪ್ರಹ್ಲಾದ್ ತಿಳಿಸಿದ್ದಾರೆ. ಕೋವಿಡ್‌ನಿಂದ ಗುಣಮುಖವಾಗುತ್ತಿದ್ದ ಪಂಚಾಕ್ಷರಪ್ಪ(54) ಎಂಬುವವರಿಗೆ ಚರ್ಮದ ಬ್ಲ್ಯಾಕ್ ಫಂಗಸ್ ದೇಶದಲ್ಲಿ ಮೊದಲ ಬಾರಿಗೆ ಪತ್ತೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+