• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗುಡ್ ನ್ಯೂಸ್: ಚಿತ್ರದುರ್ಗ ಈಗ ಕೊರೊನಾ ಸೋಂಕು ಮುಕ್ತ ಜಿಲ್ಲೆ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಜೂನ್ 18: ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಸಂಬಂಧಿಸಿದ ಎಲ್ಲಾ ವರದಿಗಳು ಬಂದಿದ್ದು, ಇದೀಗ ಕೋಟೆ ನಾಡು ಕೊರೊನಾ ವೈರಸ್ ಸೋಂಕು ಮುಕ್ತ ಜಿಲ್ಲೆಯಾಗಿ ಹೊರಹೊಮ್ಮಿದೆ.

   Corona takes more than 2000 lives in a single day in India | Oneindia Kannada

   ಜಿಲ್ಲೆಯಲ್ಲಿದ್ದ ಎಲ್ಲ ಪ್ರಕರಣಗಳ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದ್ದು, ಯಾವುದೇ ಪ್ರಕರಣಗಳ ವರದಿ ಬರುವುದು ಬಾಕಿ ಇಲ್ಲ. ಜಿಲ್ಲೆಯಲ್ಲಿ ವರದಿಯಾಗಿದ್ದ ಒಟ್ಟು 43 ಕೊರೊನಾ ಸೋಂಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಲ್ಲರೂ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಇದೀಗ ಚಿತ್ರದುರ್ಗ ಜಿಲ್ಲೆ ಕೊರೊನಾ ಸೋಂಕು ಮುಕ್ತ ಜಿಲ್ಲೆಯಾಗಿದೆ ಎಂಬುದನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.

   ಹಿರಿಯೂರಿನಲ್ಲಿ ಅಲೆಮಾರಿ ವಸತಿ ಶಾಲೆ ಅನುಮೋದನೆಗೆ ಡಿಸಿಎಂಗೆ ಮನವಿ

   ಚಿತ್ರದುರ್ಗ ಜಿಲ್ಲೆಯಲ್ಲಿಯೇ ಇದೀಗ ಕೊರೊನಾ ವೈರಸ್ ಸಂಬಂಧಿಸಿದಂತೆ ಪರೀಕ್ಷಾ ಪ್ರಯೋಗಾಲಯ ಕಾರ್ಯ ನಿರ್ವಹಿಸುತ್ತಿದ್ದು, ಜೂನ್16 ರಂದು 14 ಜನರ ಪ್ರಯೋಗಾಲಯ ವರದಿ ಬರುವುದು ಬಾಕಿ ಇತ್ತು. ಜೂನ್ 17 ರಂದು 54 ಶಂಕಾಸ್ಪದ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

   ಹೀಗಾಗಿ ಬಾಕಿ ಇದ್ದ ಎಲ್ಲ ಒಟ್ಟು 68 ಜನರ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದ್ದು, ವರದಿ ಬರುವ ಯಾವುದೇ ಪ್ರಕರಣ ಬಾಕಿ ಇರುವುದಿಲ್ಲ. ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 43 ಇತ್ತು, ಎಲ್ಲ 43 ಜನ ಈಗಾಗಲೇ ಗುಣಮುಖರಾಗಿದ್ದಾರೆ.

   ಈವರೆಗೆ 4,156 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,989 ಜನರ ವರದಿ ನೆಗೆಟಿವ್ ಬಂದಿದೆ, ಉಳಿದ 126 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ. ಸದ್ಯ ಜಿಲ್ಲೆಯಲ್ಲಿ 2989 ಜನರು ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಚಿತ್ರದುರ್ಗ ಡಿಹೆಚ್ಓ ಡಾ.ಪಾಲಾಕ್ಷ ತಿಳಿಸಿದ್ದಾರೆ.

   English summary
   All reports of coronavirus in Chitradurga district have come and now Chitradurga has become a coronavirus free district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X