ಜೆಜಿಹಳ್ಳಿ ಕಾಲೇಜು ಸ್ಥಳಾಂತರ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಹಿರಿಯೂರು, ಜೂನ್ 10: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರಿಗೆ ವರ್ಗಾವಣೆ ಮಾಡಬೇಕೆಂಬ ಸರ್ಕಾರದ ಆದೇಶವನ್ನು ವಿರೋಧಿಸಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಸರ್ಕಾರದ ನಿರ್ಧಾರಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ಕಾಲೇಜು ಸ್ಥಳಾಂತರ ಆದೇಶ‌ ಹಿಂಪಡೆಯಬೇಕು ಇಲ್ಲವಾದರೆ ನಮ್ಮ ಪ್ರಾಣ ಹೋದರೂ ಸರಿಯೇ ಕಾಲೇಜನ್ನು ಕೆಸ್ತೂರು ಗ್ರಾಮಕ್ಕೆ ಬಿಡುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಾಲೇಜು ಉಳಿಸಿ ಶಿಕ್ಷಣ ಕೊಡಿಸಿ ಎಂದು ಮನವಿ ಮಾಡಿದರು.

ನಂತರ ಮಾತನಾಡಿದ ಹಿರಿಯೂರು ಶಾಸಕಿ ಕೆ. ಪೂರ್ಣಿಮಾ, "ಇಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಆರಂಭಿಸಿದ ಕಾಲೇಜನ್ನು ಸ್ಥಳಾಂತರ ಮಾಡಿರುವುದು ಸರಿಯಲ್ಲ. ಜೊತೆಗೆ ಹಿರಿಯೂರು ತಾಲ್ಲೂಕಿನ ಯಾವುದೇ ಅಧಿಕಾರಿಗಳಿಗೆ ಮಾಹಿತಿ ಕೊಡದೆ ಸರ್ಕಾರ ಏಕಾಏಕಿ ಈ ನಿರ್ಧಾರ ಕೈಗೊಂಡಿದೆ. ಸರ್ಕಾರ ನಮ್ಮದೇ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ರೀತಿ ಮಾಡಬಾರದು ಎಂದು ಹೇಳಿದರು. ಈ ಕಾಲೇಜನ್ನು ಸ್ಥಳಾಂತರ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

javanagondanahalli college students protest to the order of transfer

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಬಿ.ಪಾಪಣ್ಣ, ಬಿಜೆಪಿ ದ್ಯಾಮಣ್ಣ, ಜೆಡಿಎಸ್ ಮುಖಂಡ ಮಂಜುನಾಥ್, ಕಾಲೇಜಿನ ಹಳೆ ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ಅತ್ಯಂತ ಹಿಂದುಳಿದ ಹಳ್ಳಿಗಳಿಂದ ಕೂಡಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣಕ್ಕೆ ಅನುಕೂಲವಾಗುವಂತೆ ಸರ್ಕಾರ 2007ರಲ್ಲಿ ಜವನಗೊಂಡನಹಳ್ಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಿತ್ತು. ಪಾಠ ಪ್ರವಚನಗಳು ಚೆನ್ನಾಗಿಯೇ ನಡೆಯುತ್ತಿದ್ದು, ಪ್ರತಿ ವರ್ಷ ಉತ್ತಮ ಫಲಿತಾಂಶವೂ ಬರುತ್ತಿತ್ತು. ಆದರೆ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆ ಕಡಿಮೆ ಇದೆ ಎಂದು ಹೇಳಿದ ಸರ್ಕಾರ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರಿಗೆ ಕಾಲೇಜನ್ನು ಸ್ಥಳಾಂತರಿಸಲು ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+