ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಗರಸಭೆ ಚುನಾವಣೆಗೂ ಮುನ್ನವೇ ಖಾತೆ ತೆರೆದ ಜೆಡಿಎಸ್

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮೇ.20: ನಗರಸಭೆ ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡ್ ನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು.

JDS candidate selected as the municipal council member before the election

ಆದರೆ ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಹೀಗಾಗಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಪಾಂಡುರಂಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಬ್ಬರೇ ಅಭ್ಯರ್ಥಿ ಇರುವ ಕಾರಣ ಮೇ 29 ರಂದು ನಡೆಯಬೇಕಿದ್ದ ಹಿರಿಯೂರಿನ 7ನೇ ವಾರ್ಡ್ ನಗರಸಭೆ ಚುನಾವಣೆ ರದ್ದಾಗಿದೆ.

ನಗರಸಭಾ ಸದಸ್ಯನಾಗಿ ಆಯ್ಕೆಯಾಗಿರುವುದಕ್ಕೆ ಪಾಂಡುರಂಗ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ ಅಭಿನಂದಿಸಿದ್ದಾರೆ.

English summary
JDS candidate has been selected as the municipal council member before the municipal elections in Hiriyur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X