ಚಿತ್ರದುರ್ಗದಲ್ಲಿ ಜನವರಿ 31ರಂದು ಉದ್ಯೋಗ ಮೇಳ

ಚಿತ್ರದುರ್ಗ, ಜನವರಿ 29 : ಚಿತ್ರದುರ್ಗದಲ್ಲಿ ಜನವರಿ 31ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಪ್ರವೇಶ ಉಚಿತವಾಗಿದ್ದು, ಹಲವಾರು ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಜಂಟಿಯಾಗಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿವೆ. ಜನವರಿ 31ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ತನಕ ಮೇಳ ನಡೆಯಲಿದೆ.

ರಾಜ್ಯದ ವಿವಿಧ ಜಿಲ್ಲೆಗಳ 25 ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಯನ್ನು ಮಾಡಿಕೊಳ್ಳಲಿವೆ. ಯುವಕ/ಯುವತಿಯರು ಮೇಳದ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಲಾಗಿದೆ.

Job fair in Chitradurga on January 31

18 ರಿಂದ 35 ವರ್ಷ ವಯೋಮಿತಿಯ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ, ಬಿಎ. ಬಿಕಾಂ, ಬಿಎಸ್‌ಸಿ, ಬಿಬಿಎಂ, ನರ್ಸಿಂಗ್ ವ್ಯಾಸಂಗ ಮಾಡಿದವರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಅಗತ್ಯ ದಾಖಲಾತಿಗಳ ಜೊತೆ ಜನವರಿ 31ರಂದು ಉದ್ಯೋಗ ಮೇಳಕ್ಕೆ ಹಾಜರಾಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+