ಸೆಪ್ಟೆಂಬರ್ 11ರಂದು ಶಿರಾದಲ್ಲಿ ಉದ್ಯೋಗ ಮೇಳ, ವಿವರ ಇಲ್ಲಿದೆ
ಚಿತ್ರದುರ್ಗ, ಸೆಪ್ಟೆಂಬರ್, 07: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸೆಪ್ಟೆಂಬರ್ 11ರಂದು ಬೆಳಗ್ಗೆ 9 ರಿಂದ 5 ಗಂಟೆಯವರೆಗೆ ತುಮಕೂರು ಜಿಲ್ಲೆಯ ಶಿರಾ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಯಾರೆಲ್ಲ ಭಾಗಿಯಾಗಬಹುದು?
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಬಿಎ, ಬಿಕಾಂ, ಬಿಎಸ್ಸಿ, ಬಿಇ, ಬಿಸಿಎ, ಎಂಸಿಎ, ಎಂಕಾಂ ಹಾಗೂ ಇತರೆ ಎಲ್ಲಾ ಅರ್ಹ ಪದವೀಧರ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಬೇಕಾದ ಪ್ರಮುಖ ದಾಖಲೆಗಳು
ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಪೋಟೋ, ಆಧಾರ್ ಕಾರ್ಡ್ ಹಾಗೂ ಬಯೋಡಾಟಾದೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಂಡು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು.

ಉದ್ಯೋಗ ಮೇಳಕ್ಕೆ ನೋಂದಯಿಸಿಕೊಳ್ಳುವುದೇಗೆ?
ಆಸಕ್ತ ಅಭ್ಯರ್ಥಿಗಳು https://skillconnect.kaushalkar.com/candidatereg ಇಲ್ಲಿ ಉಚಿತವಾಗಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9606492216 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗೋಪಾಲರೆಡ್ಡಿ ತಿಳಿಸಿದ್ದಾರೆ.












Click it and Unblock the Notifications