ಚಿತ್ರದುರ್ಗದಲ್ಲಿ ಆಗಸ್ಟ್ 5ರಂದು ಉದ್ಯೋಗ ಮೇಳ: ಇಲ್ಲಿದೆ ಹೆಚ್ಚಿನ ಮಾಹಿತಿ

ಚಿತ್ರದುರ್ಗ, ಆಗಸ್ಟ್‌ 03: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಡಾನ್ ಬಾಸ್ಕೋ ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 5ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿತ್ರದುರ್ಗದ ಚಳ್ಳಕೆರೆ ರಸ್ತೆಯ ಚಿತ್ರ ಡಾನ್ ಬಾಸ್ಕೋ ಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Job Fair On 5th August At Chitradurga

ಉದ್ಯೋಗ ಮೇಳದಲ್ಲಿ 18 ರಿಂದ 30 ವರ್ಷದೊಳಗಿನ ಎಸ್‍ಎಸ್‍ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲಮೋ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎಂ ಮತ್ತು ಇತರೆ ಪದವೀಧರು ಭಾಗವಹಿಸಬಹುದಾಗಿದೆ.

ಅಭ್ಯರ್ಥಿಗಳ ಬಳಿ ಇರಬೇಕಾದ ದಾಖಲೆಗಳೇನು?

ಚಿತ್ರದುರ್ಗದ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಆಸಕ್ತರು ಬಯೋಡಾಟಾ 6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ತರಬೇಕು. ಮೇಳದಲ್ಲಿ ಭಾಗವಹಿಸುವರ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020, 9945587060 ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 6ರಂದು ಬೃಹತ್ ಉದ್ಯೋಗ ಮೇಳ

ಉತ್ತರ ಕನ್ನಡ: ಕಾರವಾರ ಜಿಲ್ಲೆಯ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಗಸ್ಟ್ 6 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 15 ಕ್ಕೂ ಹೆಚ್ಚಿನ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ ಎಂದು ಪ್ರಾಚಾರ್ಯ ಡಾ. ಕೇಶವ ಕೆ.ಜಿ. ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು ಬೆಳಗ್ಗೆ 9ರಿಂದ ಸಾಯಂಕಾಲ 5ರವರೆಗೆ ಸಂದರ್ಶನ ನಡೆಯಲಿದೆ. ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೋಮಾ ಒಳಗೊಂಡು ಎಲ್ಲಾ ರೀತಿಯ ವಿದ್ಯಾರ್ಹತೆ ಇದ್ದವರು ಪಾಲ್ಗೊಳ್ಳಬಹುದಾಗಿದೆ. ಸ್ವ-ವಿವರ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಫೋಟೋ ತರಬೇಕು. ಹೆಸರು ನೋಂದಾಯಿಸಲು 8884461669 ಹಾಗೂ 8884461670 ದೂರವಾಣಿಗೆ ಕರೆ ಮಾಡಬಹುದು ಅಥವಾ ಸಂದರ್ಶನದ ದಿನವೇ ಆಗಮಿಸಿ ಹೆಸರು ನೋಂದಾಯಿಸಿಕೊಳ್ಳಲು ಕೂಡಾ ಅವಕಾಶವಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+