Molakalmuru constituency analysis: ಮೊಳಕಾಲ್ಮೂರು ಕ್ಷೇತ್ರದಲ್ಲಿ ಚುನಾವಣಾ ಅಖಾಡ ಹೇಗಿದೆ?
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ದಿನಕಳೆದಂತೆ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಅದರಂತೆಯೇ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಅಧಿಪತಿ ಯಾರಾಗಲಿದ್ದಾರೆ ಎನ್ನುವ ಕೂತೂಹಲ ಕೆರಳಿಸಿದೆ. ಬಹುತೇಕ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು 2018ರಲ್ಲಿ ಶ್ರೀರಾಮುಲು ಬಿಜೆಪಿಯ ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಹಾಗಾದರೆ ಈ ಬಾರಿ ಕ್ಷೇತ್ರದಲ್ಲಿ ಚುನಾವಣೆ ಕಣ ಹೇಗಿದೆ ಎಂದು ತಿಳಿಯೋಣ ಬನ್ನಿ.
ಸಚಿವ ಬಿ.ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 2013ರಲ್ಲಿ ಬಿಎಸ್‌ಆರ್ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯ ಸಾಧಿಸಿದ್ದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗಲಿಲ್ಲ. ಇದೇ ಕಾರಣದಿಂದ ಕಳೆದ 2018ರ ಚುನಾವಣೆಯಲ್ಲಿ ಶ್ರೀರಾಮುಲು ಅವರ ವಿರುದ್ಧವೇ ಬಂಡಾಯ ಸಾರಿದ್ದರು.
ಅಲ್ಲದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಾರು 40 ಸಾವಿರ ಮತಗಳನ್ನು ಪಡೆದು, ಶ್ರೀರಾಮುಲು ವಿರುದ್ಧ ಸೋಲನುಭವಿಸಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸೋತ ತಿಪ್ಪೇಸ್ವಾಮಿ, 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದರು. ಆದರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ತಿಪ್ಪೇಸ್ವಾಮಿ ಇಂದು ಸಚಿವ ಶ್ರೀರಾಮುಲು, ಹಿರಿಯ ಶಾಸಕ ಜಿಹೆಚ್. ತಿಪ್ಪಾರೆಡ್ಡಿ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದಲ್ಲಿ ಪೈಪೋಟಿ ಹೇಗಿದೆ?
2018ರ ಚುನಾವಣೆಯ ಪರಾಜಿತ ಅಭ್ಯರ್ಥಿ ಬಿ.ಯೋಗೇಶ್ ಬಾಬು ಮತ್ತೆ ಟಿಕೆಟ್‌ಗೆ ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೆ ಕಾಂಗ್ರೆಸ್ ನಾಯಕ ಹಾಗೂ ಬಳ್ಳಾರಿಯ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಇದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ತಿಪ್ಪೇಸ್ವಾಮಿ ಇದೀಗ ಯೋಗೇಶ್ ಬಾಬು ಹಾಗೂ ಉಗ್ರಪ್ಪ ನಡುವೆ ಕಾಂಗ್ರೆಸ್ ಟಿಕೆಟ್‌ಗೆ ಪೈಪೋಟಿ ಶುರುವಾಗಿದೆ.

ಪರಿಶಿಷ್ಟ ಪಂಗಡದವರದ್ದೇ ದರ್ಬಾರ್
ಜಿಲ್ಲೆಯ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರಗಳು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಾಗಿವೆ. ಹಿಂದುಳಿದಿರುವ ಈ ಕ್ಷೇತ್ರದಲ್ಲಿ ಒಮ್ಮೆ ದಿವಂಗತ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಇದೀಗ ಬಿಜೆಪಿ ಸೇರಿರುವ ತಿಪ್ಪೇಸ್ವಾಮಿಗೆ ಬಹುತೇಕ ಟಿಕೆಟ್ ಖಚಿತವಾಗಲಿದೆ ಎನ್ನಬಹುದು. ಮತ್ತೊಂದು ಕಡೆ ಮಾಜಿ ಸಂಸದ ಹಾಗೂ ನಟ ಶಶಿಕುಮಾರ್ ಕೂಡ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದಾರೆ.

3 ಪಕ್ಷಗಳಿಂದ ಪೈಪೋಟಿ ಹೇಗಿದೆ?
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಇದ್ದರೆ, ಜೆಡಿಎಸ್ ಪಕ್ಷದಲ್ಲಿ ಪ್ರಬಲ ಆಕಾಂಕ್ಷಿಗಳ ಪಟ್ಟಿ ಹೇಳಿಕೊಳ್ಳುವಷ್ಟು ಇಲ್ಲ. ಈಗಾಗಲೇ ಚಳ್ಳಕೆರೆ ಹಾಗೂ ಹೊಸದುರ್ಗ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇನ್ನು ಮೊಳಕಾಲ್ಮೂರು ಕ್ಷೇತ್ರದಲ್ಲಿರುವ ಹಲವಾರು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಚುನಾವಣೆ ಎದುರಿಸಲು ಸಜ್ಜಾಗಿದೆ. ಇತ್ತ ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಹೇಳಿಕೊಂಡು ಮತ ಪಡೆಯಲು ಮುಂದಾಗಿದೆ.
ಒಟ್ಟಾರೆಯಾಗಿ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಇದ್ದು, ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಹಿಡಿತಕ್ಕೆ ತೆಗೆದುಕೊಳ್ಳುತ್ತಾ ಅಥವಾ ಬಿಜೆಪಿಗೆ ಬಿಟ್ಟು ಕೊಡುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಬಿಜೆಪಿ ಸೇರ್ಪಡೆಯಾದ ಮಾಜಿ ಶಸಕ
ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದ ತಿಪ್ಪೇಸ್ವಾಮಿ ಇದೀಗ ಬಿಜೆಪಿ ಸೇರಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಸಚಿವ ಶ್ರೀರಾಮುಲು ಮತ್ತು ನಾನು ಅಣ್ಣತಮ್ಮಂದಿರಂತೆ ಇದ್ದೇವೆ. 2013ರಲ್ಲಿ ಬಿಎಸ್‌ಆರ್ ಪಕ್ಷದಿಂದ ಗೆದ್ದು ಬಿಜೆಪಿ ಪಕ್ಷ ಸೇರಿದ್ದೆ. ಆಗ ಮೊಳಕಾಲ್ಮೂರಲ್ಲಿ ಬಿಜೆಪಿ ಪಕ್ಷವನ್ನು ಬಲವಾಗಿ ಕಟ್ಟಿದ್ದೇನೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಶ್ರೀರಾಮುಲು ಬಿಜೆಪಿ ಟಿಕೆಟ್ ಪಡೆದು ಸ್ಪರ್ದಿಸಿದರು. ನನಗೆ ಟಿಕೆಟ್ ಕೈ ತಪ್ಪಿ ಹೋಯಿತು. ಆಗ ಶ್ರೀರಾಮುಲು ನನ್ನ ಬಳಿ ಬರಬೇಕಿತ್ತು, ನಾನು ಸೈಲಾಂಟಾಗಿರಬೇಕಿತ್ತು. ಯಾವುದೋ ಕಾರಣಕ್ಕೆ, ಇನ್ಯಾವುದೋ ಶಕ್ತಿಯಿಂದ ಇಬ್ಬರ ನಡುವೆ ಸಮರವಾಯಿತು ಎಂದು ತಿಳಿಸಿದರು.
ಐದು ವರ್ಷಗಳ ಅಣ್ಣ ತಮ್ಮಂದಿರ ಜಗಳ ಈಗ ಅಂತ್ಯವಾಗಿದೆ. ನಮ್ಮ ಹಿರಿಯ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಯವರು ನಮ್ಮಿಬ್ಬರನ್ನು ಒಂದು ಮಾಡಿದ್ದಾರೆ. ಹಾಗೆಯೇ ಮೊಳಕಾಲ್ಮೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವ ಭರವಸೆಯಿದೆ. 2018ರಲ್ಲಿ ನಡೆದಂತೆ ಮತ್ತೆ ನಡೆಯಲ್ಲ ಎಂಬ ಭರವಸೆಯಿದೆ ಎಂದು ಬಿಜೆಪಿ ಸೇರಿರುವ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ತಿಳಿಸಿದರು.

ಜಾತಿವಾರು ಮತದಾರರ ವಿವರ (ಅಂದಾಜು)
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,41,323 ಮತದಾರರು ಇದ್ದಾರೆ. 1,21,816 ಪುರುಷ ಮತದಾರರಿದ್ದರೆ, 1,19,495 ಮಹಿಳಾ ಮತದಾರರು ಇದ್ದಾರೆ. 12 ಇತರೆ ಮತಗಳಿದ್ದು, ಕ್ಷೇತ್ರದಲ್ಲಿ 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹಾಗೆಯೇ ಜಾತಿವಾರು ಮತದಾರರ ವಿವರವನ್ನು ಇಲ್ಲಿ ನೀಡಲಾಗಿದೆ.
ಪರಿಶಿಷ್ಟ ಪಂಗಡ- 90,803
ಪರಿಶಿಷ್ಟ ಜಾತಿ - 48,262
ಮುಸ್ಲಿಂ - 12,327
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications