• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕ ಬಂದ್: ಚಿತ್ರದುರ್ಗದಲ್ಲಿ ಅರೆಬೆತ್ತಲೆ ಪ್ರತಿಭಟನೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಡಿಸೆಂಬರ್ 5: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಕನ್ನಡಪರ ಸಂಘಟನೆಗಳು ಡಿ.5 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರದುರ್ಗ ನಗರದಲ್ಲಿ ಕರವೇ (ಪ್ರವೀಣ್ ಶೆಟ್ಟಿ ಬಣ)ದ ಕಾರ್ಯಕರ್ತರಿಂದ ಅರೆಬೆತ್ತಲೆ ಮೂಲಕ ಮರಾಠ ಅಭಿವೃದ್ಧಿ ನಿಗಮ ಮಂಡಳಿ ಹಿಂಪಡೆಯುವಂತೆ ಪ್ರತಿಭಟನೆ ನಡೆಸಿದರು.

ಕರ್ನಾಟಕ ಬಂದ್: ರಾಮನಗರದಲ್ಲಿ ಅಣಕು ಶವಯಾತ್ರೆ, ಪ್ರತಿಕೃತಿ ದಹನಕರ್ನಾಟಕ ಬಂದ್: ರಾಮನಗರದಲ್ಲಿ ಅಣಕು ಶವಯಾತ್ರೆ, ಪ್ರತಿಕೃತಿ ದಹನ

ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ಬಾಯಿ ಬಡ್ಕೊಂಡು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನಡೆಸುತ್ತಿದ್ದ 30ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಶನಿವಾರ ಬೆಳಿಗ್ಗೆ ಚಿತ್ರದುರ್ಗ ನಗರದಲ್ಲಿ ಕರವೇ ಕಾರ್ಯಕರ್ತರಿಂದ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಟೈರ್ ಗೆ ಬೆಂಕಿ ಹೆಚ್ಚಿದ್ದರಿಂದ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಚಿತ್ರದುರ್ಗ ಜಿಲ್ಲೆಯ ಉಳಿದಂತೆ ಹಿರಿಯೂರು, ಚಳ್ಳಕೆರೆ, ಹೊಳಲ್ಕೆರೆ, ಮೊಳಕಾಲ್ಮೂರು, ಹೊಸದುರ್ಗ ತಾಲ್ಲೂಕಿನಲ್ಲಿ ಸಹ ಬಂದ್‌ಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಎಂದಿನಂತೆ ಜನಸಾಮಾನ್ಯರ ಓಡಾಟ‌, ಅಂಗಡಿ ಮುಂಗಟ್ಟುಗಳು ಓಪನ್ ಆಗಿದ್ದವು. ಹಣ್ಣು, ಹಾಲು ತರಕಾರಿ ಮಾರುಕಟ್ಟೆ ಎಂದಿನಂತೆ ಇತ್ತು. ದಿನನಿತ್ಯದಂತೆ ಬಸ್, ಕಾರು, ಆಟೋ, ಬೈಕ್ ಇತರೆ ವಾಹನಗಳ ಸಂಚಾರವಿತ್ತು. ಮರಾಠ ಅಭಿವೃದ್ಧಿ ನಿಗಮ ಹಿಂಪಡೆಯುವಂತೆ

ಹಿರಿಯೂರಿನಲ್ಲಿ ಕರವೇ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

   ಸತತ 10 t20 ಪಂದ್ಯಗಳನ್ನು ಗೆದ್ದ Kohli ಪಡೆ | Oneindia Kannada
   English summary
   Much of the Chitradurga district has had mixed reactions to the Karnataka bandh.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X