ಚಿತ್ರದುರ್ಗ: ಮತಗಟ್ಟೆ ಬಳಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಗಲಾಟೆ
ಚಿತ್ರದುರ್ಗ, ಮೇ 10: ಕರ್ನಾಟಕ ವಿಧಾನಸಭಾ ಚುನಾವಣೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಆರಂಭವಾಗಿದೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 7ಗಂಟೆಗೆ ಮತದಾನ ಆರಂಭಗೊಂಡಿದೆ.
ಮತದಾನ ಆರಂಭವಾಗುತ್ತಿದ್ದಂತೆಯೇ ಬಿಡುವಿಲ್ಲದಂತೆ ಮತದಾರರು ಬಂದು ಮತದಾನ ಮಾಡುತ್ತಿದ್ದು, ಈ ವೇಳೆ ಚಿತ್ರದುರ್ಗ ಜಿಲ್ಲೆಯಲ್ಲಿ ಜೋಗಿಮಟ್ಟಿ ಮತಗಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ದೇಶದ್ರೋಹಿ ಪಕ್ಷಕ್ಕೆ ಸಂಘಟನೆಗೆ ಓಟ್ ಹಾಕಬೇಡಿ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ. ಇನ್ನು ಈ ಹೇಳಿಕೆಯಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಯಾಗಿ ಬಿಜೆಪಿ ಕೋಮುವಾದಿ ಪಕ್ಷ ಎಂದು ಘೋಷಣೆ ಕೂಗಿದ್ದಾರೆ.

ಕಾಂಗ್ರೆಸ್ ದೇಶದ್ರೋಹಿ ಸಂಘಟನೆ ಎಂದು ಕೂಗಿದ ಬಿಜೆಪಿಯ ಕಾರ್ಯಕರ್ತ ಓಂಕಾರ್ ಎಂದು ಗುರುತಿಸಲಾಗಿದ್ದು, ಮತಗಟ್ಟೆ ಬಳಿ ಕೆಲ ಹೊತ್ತು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಸ್ಥಳೀಯ ಮುಖಂಡರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1648 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಯಾವುದೇ ಅಹಿತರಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಎಲ್ಲಾ ಪಕ್ಷದ ಅಭ್ಯರ್ಥಿಗಳ ನಡುವೆ ತೀರಾ ಜಿದ್ದಾಜಿದ್ದಿಯ ಪೈಪೋಟಿ ಇದೆ.












Click it and Unblock the Notifications