Kiccha Sudeep Campaign: ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ನಟ ಕಿಚ್ಚ ಸುದೀಪ್ ಅಬ್ಬರದ ಪ್ರಚಾರ
ಚಿತ್ರದುರ್ಗ, ಏಪ್ರಿಲ್, 26: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ಅಬ್ಬರದ ಪ್ರಚಾರವನ್ನು ಕೈಗೊಂಡಿದ್ದಾರೆ. ಅಲ್ಲದೆ ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ಇತ್ತೀಚಿನ ದಿನಗಳಲ್ಲಿ ಸಿನಿಮಾ ತಾರೆಯರನ್ನು ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡುಬರುತ್ತಿದೆ. ಸದೇ ರೀತಿಯಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಅಭ್ಯರ್ಥಿ ಪರವಾಗಿ ಅಬ್ಬರದ ಮತಬೇಟೆಗೆ ಇಳಿದಿದ್ದಾರೆ.
ಇಂದು ಮೊಳಕಾಲ್ಮೂರು ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸುದೀಪ್ ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಇನ್ನು ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಪರವಾಗಿ ಮತಪ್ರಚಾರ ನೆಡೆಸುವಾಗ ಸುದೀಪ್ ನೋಡಲು ಸಾವಿರಾರು ಮಂದಿ ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಅವರನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆಯೂ ನಟ ಸುದೀಪ್ ಜನರಿಗೆ ಮನವಿ ಮಾಡಿದರು.

ಇನ್ನು ಚುನಾವಣಾ ಸಿಬ್ಬಂದಿ ಆಗಮಿಸಿ ಕಿಚ್ಚ ಸುದೀಪ್ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications