Karnataka election 2023: ಚಿತ್ರದುರ್ಗದಲ್ಲಿ ಬಿಜೆಪಿ ಸೇರ್ಪಡೆಯಾದ ಸೌಭಾಗ್ಯ ಬಸವರಾಜನ್

ಚಿತ್ರದುರ್ಗ, ಮೇ, 05: ವಿಧಾನಸಭೆ ಚುನಾವಣೆ ಸಮಿಪಿಸುತ್ತಿರುವಾಗಲೇ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳು ಆಗುತ್ತಲೇ ಇವೆ. ಅದೇ ರೀತಿ ಇದೀಗ ಚಿತ್ರದುರ್ಗ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಬಿಜೆಪಿ ಸೇರ್ಪಡೆ ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸೌಭಾಗ್ಯ ಅವರು ಚುನಾವಣಾ ಕಣದಿಂದ ಹಿಂದೆ ಸರಿದು ವಿಜಯೇಂದ್ರ ನೇತೃತ್ವದಲ್ಲಿ ಇಂದು ಬಿಜೆಪಿ ಸೇರ್ಪಡೆ ಆಗಿದ್ದಾರೆ.

Karnataka election 2023: Soubhagya Basavarajan joins BJP in Chitradurga

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಕೆ ಬಸವರಾಜನ್ ಅವರು ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸೌಭಾಗ್ಯ ಬಸವರಾಜನ್ ಅವರನ್ನು ಚುನಾವಣಾ ಕಣದಲ್ಲಿಲ್ಲಿರಿಸಿದ್ದರು. ಆದರೆ ಅವರು ಅಂತಿಮವಾಗಿ ಬಿಜೆಪಿ ಪಕ್ಷ ಸೇರಿ ಅಚ್ಚರಿ ಮೂಡಿಸಿದ್ದಾರೆ.

ಅಲ್ಲದೆ ಇಂದು ಸಂಜೆ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಜಿ.ಹೆಚ್. ತಿಪ್ಪಾರೆಡ್ಡಿ ಅವರ ಮನೆಗೆ ಭೇಟಿ ನೀಡಿ ಅವರು ಮಾತುಕತೆ ನಡೆಸಿದ್ದರು. ಆಗಲೇಚ ಸೌಭಾಗ್ಯ ಬಸವರಾಜನ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ ಎನ್ನಲಾಗಿತ್ತು. ಇದೀಗ ಅಂತಿಮವಾಗಿ ಕಮಲ ಪಾಳಯದತ್ತ ಮುಖ ಮಾಡಿದ್ದಾರೆ.

ಮಾಜಿ ಶಾಸಕ ಎಸ್.ಕೆ ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ನಂತರ ಚುನಾವಣಾ ಪ್ರಚಾರದಲ್ಲಿ ಕೂಡ ಭಾಗಿಯಾಗಿದ್ದರು. ಆದರೆ ಬದಲಾದ ಸಮಯದಲ್ಲಿ ಇದೀಗ ಅವರು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.

ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆ

ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೇಶ ವಿಕಾಸದ ಸಕರಾತ್ಮಕ ಚಿಂತನೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರಮುಖಿ ಆಲೋಚನೆಗಳನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಇತ್ತೀಚೆಗಷ್ಟೆ ತಿಳಿಸಿದ್ದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ರಾಜೀನಾಮೆ ಕೊಟ್ಟ ಆನಂತರದಲ್ಲಿ ನನ್ನ ಹಿತೈಷಿಗಳು, ಮಾರ್ಗದರ್ಶಕರು ಸೇರಿದಂತೆ ಹಿತ ಚಿಂತಕರಲ್ಲಿ ಪಡೆದ ಸಲಹೆ ಮತ್ತು ಮಾರ್ಗದರ್ಶನದ ಹಿನ್ನೆಲೆಯಲ್ಲಿ ಬಿಜೆಪಿ ಸೇರಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿಂದುತ್ವ, ಸಾಂಸ್ಕೃತಿಕ ರಾಷ್ಟ್ರೀಯತೆಯ ಸಿದ್ಧಾಂತದ ಮೂಲಕ ರಾಷ್ಟ್ರ ಮೊದಲು ಎಂಬ ತತ್ವದೊಂದಿಗೆ ಮುನ್ನಡೆಯುತ್ತಿರುವ ಶಾಸಕರೂ ಆಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಹೆಚ್ಚಿನ ಅಂತರದ ಮತಗಳಿಂದ ಗೆಲ್ಲಿಸಲು ಹೆಗಲಿಗೆ ಹೆಗಲು ಕೊಡುತ್ತೇನೆ ಎಂದು ಹೇಳಿದ್ದರು.

ದೇಶದಲ್ಲಿ ದಲಿತರು, ಕ್ರೈಸ್ತ, ಮುಸಲ್ಮಾನರು, ಶೋಷಿತರು ಸೇರಿದಂತೆ ಎಲ್ಲಾ ವರ್ಗದ ಜನರ ವಿಕಾಸಕ್ಕಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಸರ್ವರ ಹಿತಕ್ಕಾಗಿ ಸಕರಾತ್ಮಕವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿರೀಕ್ಷೆಗೂ ಮೀರಿ ತಮ್ಮ ತಂಡದೊಂದಿಗೆ ಶ್ರಮಿಸುತ್ತಿದ್ದಾರೆ. ಅವರ ದೂರ ದೃಷ್ಟಿಯ ಕಲ್ಯಾಣ ಕಾರ್ಯಕ್ರಮಗಳಿಂದಾಗಿ ಇಡೀ ಜಗತ್ತು ಭಾರತದತ್ತ ದೃಷ್ಟಿ ಬೀರಿರುವುದು ನನ್ನನ್ನು ಆಕರ್ಷಿಸಿದೆ ಎಂದು ಹೇಳಿದ್ದರು.

ಆರ್ಥಿಕ ಹಿಂಜರಿತ ಎದುರಾದ ಸಂದರ್ಭದಲ್ಲಿ ದೇಶದ ಜನರು ಯಾವುದೇ ಸಮಸ್ಯೆಗೆ ಒಳಗಾಗದ ರೀತಿಯಲ್ಲಿ ಸಮಸ್ಯೆ ಪರಿಹರಿಸಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಮೋದಿ ಅವರು ಕೈಗೊಂಡ ಕಾರ್ಯಕ್ರಮಗಳನ್ನು ಭಾರತ ಮಾತ್ರವಲ್ಲದೆ ಜಗತ್ತಿನ ಬಲಿಷ್ಟ ರಾಷ್ಟ್ರಗಳು ಕೊಂಡಾಡಿವೆ. ದೇಶದಲ್ಲಿ ಈ ಹಿಂದೆ ನಡೆಯುತ್ತಿದ್ದ ವಿದ್ವಂಸಕ ಕೃತ್ಯಗಳಿಗೆ ಕಡಿವಾಣ ಹಾಕುವ ಮೂಲಕ ಜನರು ಶಾಂತಿ ನೆಮ್ಮದಿಯಿಂದ ಬದುಕುವಂತ ಅಹ್ಲಾದಕರ ವಾತಾವರಣವನ್ನು ಕಲ್ಪಿಸಿರುವ ಮೋದಿ ಅವರು ಭಾರತದ ಹಿರಿಮೆಯನ್ನು ವಿಶ್ವ ಮಟ್ಟದಲ್ಲಿ ಕೊಂಡೊಯ್ದಿದ್ದಾರೆ. ಜೊತೆಗೆ ಭಾರತದ ರಕ್ಷಣಾ ವ್ಯವಸ್ಥೆ ಬಲಿಷ್ಠವಾಗಿಸುವ ಮೂಲಕ ಸೇನಾನಿಗಳು ವಿಶ್ವಾಸ ಮತ್ತು ಆತ್ಮಸ್ಥೈರ್ಯದಿಂದ ಕರ್ತವ್ಯ ನಿರ್ವಹಿಸುತ್ತಿರುವುದು ನನಗೆ ಮೆಚ್ಚುಗೆಯಾಗಿದೆ ಎಂದಿದ್ದರು.

ಶಾಸಕರು ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ.ರವಿ ಅವರ ಜಿಲ್ಲೆ ಮತ್ತು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ. ಅದರ ಪರಿಣಾಮ ಮಡಿಕಲ್ ಕಾಲೇಜು ಆರಂಭ, ಕೆರೆಗಳ ಸೌಂದರ್ಯಕರಣ, ನಗರದ ರಸ್ತೆಗಳ ಅಭಿವೃದ್ಧಿ, ನಗರದ ಬೈಪಾಸ್ ರಸ್ತೆ ಹೆದ್ದಾರಿಯಾಗಿ ಮೇಲ್ದರ್ಜೆಗೇರಿರುವುದು, ಐಡಿಎಸ್‍ಜಿ ಕಾಲೇಜು ಅಭಿವೃದ್ಧಿ, ನಗರಸಭೆಗೆ ಹೆಚ್ಚಿನ ಅನುದಾನ, ಕ್ಷೇತ್ರದಲ್ಲಿ ಜಿಲ್ಲಾ ಮತ್ತು ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಸೇರಿದಂತೆ ಸಹಸ್ರಾರು ಕೋಟಿ ರೂ.ಗಳ ಅನುದಾನದೊಂದಿಗೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಟಾನಗೊಳಿಸಿದ್ದಾರೆ. ಇವೆಲ್ಲವನ್ನು ಮೆಚ್ಚಿಕೊಂಡು ಬಿಜೆಪಿ ಸೇರಿದ್ದೇನೆ ಎಂದು ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+