Get Updates
Get notified of breaking news, exclusive insights, and must-see stories!

ಹೊಸದುರ್ಗದಲ್ಲಿ ಗೆದ್ದು ಹೊಸ ದಾಖಲೆ ಬರೆದ ಗೂಳಿಹಟ್ಟಿ ಶೇಖರ್!

ಚಿತ್ರದುರ್ಗ, ಮೇ 22 : ಮಾಜಿ ಸಚಿವ ಗೂಳಿಹಟ್ಟಿ ಶೇಖರ್ 2018ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹೊಸದುರ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು ಗೆಲ್ಲುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

ಗೂಳಿಹಟ್ಟಿ ಶೇಖರ್ ಈ ಬಾರಿಯ ಚುನಾವಣೆಯಲ್ಲಿ 90,562 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್‌ನ ಬಿ.ಜಿ.ಗೋವಿಂದಪ್ಪ ಅವರನ್ನು ಸೋಲಿಸಿದ್ದಾರೆ. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗೂಳಿಹಟ್ಟಿ ಶೇಖರ್‌ ಅವರನ್ನು ಬಿ.ಜಿ.ಗೋವಿಂದಪ್ಪ ಸೋಲಿಸಿದ್ದರು.

1952ರಿಂದ 2013ರ ತನಕ ಕ್ಷೇತ್ರದಲ್ಲಿ 15 ಚುನಾವಣೆ ನಡೆದಿದೆ. ಆದರೆ, ಎಂದೂ ಬಿಜೆಪಿ ಅಭ್ಯರ್ಥಿ ಗೆದ್ದಿಲ್ಲ. 2018ರಲ್ಲಿ ಗೂಳಿಹಟ್ಟಿ ಶೇಖರ್ ಅವರು ಗೆಲ್ಲುವ ಮೂಲಕ ಕ್ಷೇತ್ರದಲ್ಲಿ ಹೊಸ ದಾಖಲೆ ಮಾಡಿದ್ದಾರೆ.

Karnataka elections : Goolihatti Shekar creates history after winning the elections

ಕ್ಷೇತ್ರದಲ್ಲಿ ಕಾಂಗ್ರೆಸ್ 8 ಬಾರಿ, ಪಕ್ಷೇತರರು 5 ಬಾರಿ, ಪಿಎಸ್‌ಪಿ ಮತ್ತು ಜೆಎನ್‌ಪಿ ಅಭ್ಯರ್ಥಿಗಳು ತಲಾ 1 ಬಾರಿ ಗೆಲುವು ಸಾಧಿಸಿದ್ದಾರೆ. 1981ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆರ್.ನಾಗರಾಜಗುಪ್ತಾ ಅವರು ಸ್ಪರ್ಧಿಸಿ 5 ಸಾವಿರ ಮತಗಳ ಅಂತರದಿಂದ ಸೋತಿದ್ದರು.

2004ರಲ್ಲಿ ಡಿ.ಗುರುಸ್ವಾಮಿ, 2008ರಲ್ಲಿ ಎಸ್.ಲಿಂಗಮೂರ್ತಿ, 2013ರ ಚುನಾವಣೆಯಲ್ಲಿ ಎಂ.ಲಕ್ಷ್ಮಣ್ ಅವರು ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಅರಳಿದೆ.

2008ರ ಚುನಾವಣೆಯಲ್ಲಿ ಗೂಳಿಹಟ್ಟಿ ಶೇಖರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕ್ಷೇತ್ರದಲ್ಲಿ ಜಯಗಳಿಸಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ಸಹಕಾರ ನೀಡಿ, ಯಡಿಯೂರಪ್ಪ ಸಂಪುಟದಲ್ಲಿ ಯುವಜನ ಸೇವೆ, ಕ್ರೀಡೆ ಹಾಗೂ ಜವಳಿ ಸಚಿವರಾಗಿ ಕೆಲಸ ಮಾಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+