ಚಿತ್ರದುರ್ಗದಲ್ಲಿ 500 ಕೋಟಿ ವೆಚ್ಚದ ಮೆಡಿಕಲ್ ಕಾಲೇಜಿಗೆ ಸರ್ಕಾರದ ಅನುಮೋದನೆ

ಚಿತ್ರದುರ್ಗ, ಫೆಬ್ರವರಿ 17: ಕರ್ನಾಟಕದಲ್ಲಿ ಆರೋಗ್ಯ ವಲಯದ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಚಿತ್ರದುರ್ಗದಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ 100 ಎಂಬಿಬಿಎಸ್ ಸೀಟುಗಳ ಕಾಲೇಜು ಆರಂಭವಾಗಲಿದ್ದು, ನೂತನ ಕಟ್ಟಡ ನಿರ್ಮಾಣ ಭರದಿಂದ ಸಾಗಿದೆ. ಈ ನಡುವೆ ಚಿತ್ರದುರ್ಗದಲ್ಲಿ 150 ಎಂಬಿಬಿಎಸ್ ಸೀಟುಗಳನ್ನು ಹೊಂದಲಿರುವ 'ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ' ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಿವಿಲ್ ಕಾಮಗಾರಿ ಸೇರಿ ಒಟ್ಟು 500 ಕೋಟಿ ರೂ. ಖರ್ಚಾಗಲಿದೆ ಎಂದು ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದರು.

Karnataka Govt Green Signal For setting up new medical college at Chitradurga

ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಕಾಲೇಜು ಸ್ಥಾಪನೆ:

ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಕರ್ನಾಟಕದಲ್ಲಿ ಇರುವ 17 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಜೊತೆ ಹೊಸದಾಗಿ 4 ಸಂಸ್ಥೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥಗೆ 100 ಎಂಬಿಬಿಎಸ್ ಸೀಟುಗಳ ಪ್ರವೇಶ ಮಿತಿಯೊಂದಿಗೆ 2022-23ನೇ ಸಾಲಿಗೆ ಲೆಟರ್ ಆಫ್ ಇಂಟೆಂಟ್ ನೀಡಲಾಗಿದೆ.

ಈಗ ಚಿತ್ರದುರ್ಗದಲ್ಲೂ ಕಾಲೇಜು ಕಟ್ಟಡದ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಆ ಮೂಲಕ ರಾಜ್ಯದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗಲಿದೆ. ಅಷ್ಟೇ ಅಲ್ಲದೆ ವೈದ್ಯಕೀಯ ಕಾಲೇಜುಗಳಿಗೆ ಹೊಂದಿಕೊಂಡ ಆಸ್ಪತ್ರೆಗಳಲ್ಲಿ ಬಡವರಿಗೆ ಉನ್ನತ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಲಿದೆ ಎಂದು ತಿಳಿಸಿದ್ದಾರೆ.

ಒಂದು ಸಾವಿನ ಜನಸಂಖ್ಯೆಗೆ ಒಬ್ಬ ವೈದ್ಯ:

ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳ ಪ್ರಕಾರ ಪ್ರತಿ 1,000 ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕು. ಆದರೆ ಕರ್ನಾ'ಕದಲ್ಲಿ 1,800 ಜನಸಂಖ್ಯೆಗೆ ಒಬ್ಬ ವೈದ್ಯರ ಲಭ್ಯತೆಯಿದೆ. ಈ ಅಸಮತೋಲನವನ್ನು ಬಗೆಹರಿಸಲು ಹಾಗೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ. ಇದೇ ಪ್ರಯತ್ನದ ಭಾಗವಾಗಿ ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದು ಸಚಿವರು ತಿಳಿಸಿದರು.

ಚಿತ್ರದುರ್ಗದಲ್ಲಿ 150 ಸೀಟುಗಳ ಎಂಬಿಬಿಎಸ್ ಕಾಲೇಜು:

2014-15 ಸಾಲಿನ ಆಯವ್ಯಯದಲ್ಲಿನ ಘೋಷಿಸಿದಂತೆ ಚಿತ್ರದುರ್ಗದಲ್ಲಿ 150 ಸೀಟುಗಳ ಎಂಬಿಬಿಎಸ್ ಕಾಲೇಜನ್ನು 2015-16ರಲ್ಲೇ ಸ್ಥಾಪಿಸಲು ತಾತ್ವಿಕ ಒಪ್ಪಿಗೆ ನೀಡಲಾಗಿತ್ತು. ಆದರೆ 2013-14ರ ಆರ್ಥಿಕ ವರ್ಷದಲ್ಲಿ ಕಲಬುರ್ಗಿ, ಗದಗ, ಕೊಪ್ಪಳ, ಕಾರಾವಾರ, ಕೊಡಗು ಮತ್ತು ಚಾಮರಾಜನಗರದಲ್ಲಿ 6 ಹೊಸ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅಗತ್ಯ ಅನುದಾನ ಹೊಂದಿಸಿಕೊಳ್ಳಬೇಕಾತ್ತು. ಆದ್ದರಿಂದ ತುಮಕೂರು, ಚಿತ್ರದುರ್ಗ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. 2021-22ನೇ ಸಾಲಿನ ಬಜೆಟ್ ನಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು ಎಂದು ಸಚಿವ ಡಾ ಕೆ ಸುಧಾಕರ್ ವಿವರಿಸಿದರು.

2023-24ನೇ ಸಾಲಿನಿಂದ ಮೆಡಿಕಲ್ ಕಾಲೇಜು ಆರಂಭ:

2023-24ನೇ ಸಾಲಿನಿಂದ ಚಿತ್ರದುರ್ಗದ ಮೆಡಿಕಲ್ ಕಾಲೇಜನ್ನು ಆರಂಭಿಸಲು ಅಗತ್ಯ ಪ್ರಕ್ರಿಯೆಗಳನ್ನು ನಡೆಸಬೇಕೆಂದು ರಾಜ್ಯ ಸರ್ಕಾರ ಸೂಚಿಸಿದೆ. ಇದಕ್ಕೆ ಪೂರಕವಾದ ಸಿದ್ಧತೆ ನಡೆಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆ ತರುತ್ತಿದ್ದು, ಈ ಹೊಸ ಕಾಲೇಜು ನಿರ್ಮಾಣ ಕೂಡ ಸುಧಾರಣೆಯ ಭಾಗವಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ಸಂತಸ ವ್ಯಕ್ತಪಡಿಸಿದ್ದಾರೆ.

Recommended Video

      ಕುಂಕುಮ‌ ಹಾಕೊಂಡು ಬಂದಿದ್ದ ವಿದ್ಯಾರ್ಥಿಗೆ ನೋ ಎಂಟ್ರಿ ಎಂದ ಶಿಕ್ಷಕ,ನಂತರ ಆಗಿದ್ದೇನು? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+