ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ನಿಯಂತ್ರಣದಲ್ಲಿ ಕರ್ನಾಟಕ ಗೆದ್ದಿದೆ: ಸಚಿವ ಶ್ರೀರಾಮುಲು

|
Google Oneindia Kannada News

ಚಿತ್ರದುರ್ಗ, ಏಪ್ರಿಲ್ 14: ಕರ್ನಾಟಕ ರಾಜ್ಯದಲ್ಲಿ ಈವರೆಗೆ 247 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, 8 ಜನ ಸಾವಿಗೀಡಾಗಿದ್ದರೆ, 60 ಜನ ಗುಣಮುಖರಾಗಿದ್ದಾರೆ. ಹೀಗಾಗಿ ಭಾರತ ದೇಶದಲ್ಲಿ ಪ್ರಾರಂಭದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿದ್ದ ಕರ್ನಾಟಕ ರಾಜ್ಯ ಈಗ 12ನೇ ಸ್ಥಾನಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಅವರು, ಕೊರೊನಾ ಸೋಂಕು ಹರಡದಂತೆ ಮೇ 3 ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ. ಆದ್ದರಿಂದ ಎಲ್ಲರೂ ಪ್ರಧಾನಿ ಮೋದಿಯವರು ನೀಡಿರುವ ಸಪ್ತ ಸೂತ್ರಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದರು.

ಮೋದಿ ಹೇಳಿದ ಸಪ್ತ ಸೂತ್ರ ನಿಯಮ ತಪ್ಪದೇ ಪಾಲಿಸಿ: ಯಡಿಯೂರಪ್ಪಮೋದಿ ಹೇಳಿದ ಸಪ್ತ ಸೂತ್ರ ನಿಯಮ ತಪ್ಪದೇ ಪಾಲಿಸಿ: ಯಡಿಯೂರಪ್ಪ

ಪ್ರಧಾನಿ ಮೋದಿಯವರು ಹೇಳಿರುವಂತೆ ರಾಜ್ಯದಲ್ಲಿ ಯಾರು ಸಹ ಹಸಿವಿನಿಂದ ಬಳಲಬಾರದು. ಹೀಗಾಗಿ ಶ್ರೀಮಂತರು ಹಾಗೂ ಸ್ಥಿತಿವಂತರಾಗಿರುವವರು ಬಡವರಿಗೆ, ನಿರ್ಗತಿಕರಿಗೆ ಮತ್ತು ಕೂಲಿಕಾರ್ಮಿಕರಿಗೆ ಸಹಾಯ ಮಾಡಿ ಎಂದು ಕರೆ ನೀಡಿದರು. ಜೊತೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಕೂಡ ಬಡವರು, ನಿರ್ಗತಿಕರಿಗೆ ಆಹಾರ ವ್ಯವಸ್ಥೆ ಮಾಡಲಾಗುವುದು ಎಂಬ ಭರವಸೆ ಸಹ ನೀಡಿದರು.

 Karnataka Won Under Corona Control: Minister B Sriramulu

ಕೊರೊನಾ ವೈರಸ್ ಭೀತಿಯಿಂದ ಎಲ್ಲರೂ ಮಾಸ್ಕ್ ಬಳಸುತ್ತಿದ್ದಾರೆ. ಆದರೆ ವೈದ್ಯರು ಹೊರತುಪಡಿಸಿ ಸಾರ್ವಜನಿಕರು ಎನ್ 95 ಮಾಸ್ಕ್ ಧರಿಸುವ ಅಗತ್ಯವಿಲ್ಲ. ಜನಸಾಮಾನ್ಯರು ಕೇವಲ ಬಟ್ಟೆಗಳಿಂದ ತಯಾರಿಸಿದ ಮಾಸ್ಕ್ ಧರಿಸಿದರೆ ಸಾಕು ಎಂದು ಹೇಳಿದರು.

ಬಟ್ಟೆ ಮಾಸ್ಕ್ ಗಳಿಂದ ಯಾವುದೇ ಸಮಸ್ಯೆಗಳಿಲ್ಲ, ಜೊತೆಗೆ ಕೋವಿಡ್ 19 ಹರಡದಂತೆ ಜಿಲ್ಲೆಯ ಗಡಿಭಾಗದಲ್ಲಿ ಬಂದ್ ಮಾಡಿ ಕೊರೊನಾ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಈ ವೇಳೆ ಕೃಷಿ ಕಾಯಕಕ್ಕೆ ಸಕಲ ನೆರವು ನೀಡುವ ಮೂಲಕ ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸೂಚಿಸಿದರು.

English summary
Karnataka has now fallen to the 12th position of Karnataka, which has been ranked at the third position in the list of coronavirus cases, Health Minister B. Sriramulu said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X