• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠದ ಹಿರಿಯ ಶ್ರೀಗಳು ವಿಧಿವಶ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ನವೆಂಬರ್ 5: ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠದ ಹಿರಿಯ ಶ್ರೀಗಳಾದ ಮಾರ್ಕಂಡೇಯ ಮುನಿಸ್ವಾಮೀಜಿ (75) ಗುರುವಾರ ಸಂಜೆ ಉಸಿರಾಟ ತೊಂದರೆಯಿಂದ ನಿಧನರಾದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿ ಆದಿಜಾಂಬವ ಮಠದಲ್ಲಿ ಸಂಜೆ 5.30ರ ಸಮಯದಲ್ಲಿ ಶ್ರೀಗಳಿಗೆ ಉಸಿರಾಟದ ತೊಂದರೆ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಕಾರಿನ ಚಾಲಕನನ್ನು ಕರೆದುಕೊಂಡು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆ ವಾಂತಿ ಮಾಡಿಕೊಂಡಿದ್ದು, ಮಾತು ನಿಲ್ಲಿಸಿದ್ದಾರೆ ಎನ್ನಲಾಗಿದೆ.

ಚಾಲಕ ತಕ್ಷಣ ಶ್ರೀಗಳನ್ನು ಹಿರಿಯೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ತಪಾಸಣೆ ನಡೆಸಿದಾಗ ಆದರೆ ಅಷ್ಟೋತ್ತಿಗಾಗಲೇ ಶ್ರೀಗಳು ಕೊನೆಯುಸಿರೆಳೆದಿದ್ದಾರೆ. ಇನ್ನು ವೈದ್ಯರು ಶ್ರೀಗಳ ನಿಧನವನ್ನು ದೃಢಪಡಿಸಿದರು. ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಮೂಲಗಳಿಂದ ವರದಿಯಾಗಿದೆ.

ಆದಿಜಾಂಬವ ಮುನಿ ಶ್ರೀಗಳು ವಂಶ ಪಾರಂಪರೆಯಿಂದ ಕಾಷಾಯ ಧರಿಸಿ ಶ್ರೀಮಠದ ಸೇವೆಯಲ್ಲಿ ತೊಡಗಿದ್ದರು. ಪ್ರತಿವರ್ಷ ಸಾಮೂಹಿಕ ವಿವಾಹ ಹಾಗೂ ಕೋಡಿಹಳ್ಳಿ ಗ್ರಾಮದಲ್ಲಿ ನಡೆಯುವ ಶ್ರೀರೇಣುಕಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುತ್ತಿದ್ದ ಸಾವಿರಾರು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮದ ಏರ್ಪಡಿಸಿಕೊಂಡು ಬರುತ್ತಿರುವುದು ಶ್ರೀಗಳ ಮಹಾ ಕಾರ್ಯವಾಗಿತ್ತು.

ಶ್ರೀಗಳ ನಿಧನಕ್ಕೆ ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್, ಚಿತ್ರದುರ್ಗ ಜಿಲ್ಲೆಯ ರಾಜಕೀಯ ಪ್ರತಿನಿಧಿಗಳು, ಮಠಾಧೀಶರು ಸೇರಿದಂತೆ ಭಕ್ತ ಸಮೂಹದವರು ಸಂತಾಪ ಸೂಚಿಸಿದ್ದಾರೆ.

ಬಸ್ ಚಲಿಸುವಾಗ ಎಚ್ಚರ ಕಳೆದುಕೊಂಡ ಚಾಲಕ, ಸಮಯಪ್ರಜ್ಞೆ ಮೆರೆದ ನಿರ್ವಾಹಕ
ದಾವಣಗೆರೆಯಿಂದ ಹಿರಿಯೂರು ನಗರ ಮೂಲಕ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕ ಇದ್ದಕ್ಕಿದ್ದಂತೆ ಎಚ್ಚರ ತಪ್ಪಿದಾಗ ನಿರ್ವಾಹಕ ಸಮಯಪ್ರಜ್ಞೆ ಮೆರೆದಿದ್ದು, ನಿರ್ವಾಹಕ ಹ್ಯಾಂಡ್ ಬ್ರೇಕ್ ಹಾಕಿ ಬಸ್ ಅನ್ನು ನಿಲ್ಲಿಸಿ, ಸಂಭವಿಸಬಹುದಾಗಿದ್ದ ಅವಘಡವನ್ನು ತಪ್ಪಿಸಿರುವ ಘಟನೆ ಹಿರಿಯೂರು ನಗರದ ಗಾಂಧಿ ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

50 ವರ್ಷ ವಯಸ್ಸಿನ ಬಸ್ ಚಾಲಕ ರವಿ ಇದ್ದಕ್ಕಿದ್ದಂತೆ ಎಚ್ಚರ ತಪ್ಪಿದಾಗ ನಿರ್ವಾಹಕ ಗಂಗಾಧರ್ ಹ್ಯಾಂಡ್ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿ ತಕ್ಷಣ ರವಿಯನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಬಸ್‌ನಲ್ಲಿ 10 ಪ್ರಯಾಣಿಕರಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ದೀಪಾವಳಿ ಹಬ್ಬದ ದಿನದಂದು ಬಸ್ ನಿರ್ವಾಹಕ ಉತ್ತಮ ಕೆಲಸ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದಾರೆ.

English summary
Markandeya Muniswamiji, 75, the Kodihalli Adijambava Bruhanmath, died of breathing problems on Thursday evening (November 4).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X