ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಮುಖಂಡ ಸಿ.ಟಿ ರವಿ ವಿರುದ್ಧ ಡಿಸಿಪಿಗೆ ದೂರು ನೀಡುತ್ತೇವೆ-ಡಿ.ಕೆ ಶಿವಕುಮಾರ್‌

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ನವೆಂಬರ್‌28 : ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನು ನೋಡಿಕೊಳ್ಳಿ. ಬಳ್ಳಾರಿ ಜಿಲ್ಲೆಯಲ್ಲಿರುವ ಒಳ ಸಮಸ್ಯೆಗಳನ್ನು ಸರಿ ಮಾಡಿಕೊಳ್ಳಲಿ ಎಂದು ಸಾರಿಗೆ ಸಚಿವ ಶ್ರೀರಾಮುಲು ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

ಚಿತ್ರದುರ್ಗ ತಾಲೂಕಿನ ಕ್ಯಾದಿಗೆರೆಯ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಧ್ಯೆ ಕುರ್ಚಿ ಚಿಂತೆ ಎನ್ನುವ ಸಚಿವ ಶ್ರೀರಾಮುಲು ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಚಿಕ್ಕಮಗಳೂರು, ಚಿತ್ರದುರ್ಗ ಸುದ್ದಿ; ಕ್ಯಾಬ್‌ ಚಾಲಕನಿಗೆ ಥಳಿತ, ಅಪಘಾತಚಿಕ್ಕಮಗಳೂರು, ಚಿತ್ರದುರ್ಗ ಸುದ್ದಿ; ಕ್ಯಾಬ್‌ ಚಾಲಕನಿಗೆ ಥಳಿತ, ಅಪಘಾತ

ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಸರಣಿ ಹತ್ಯೆ ನಡೆಯುತ್ತದೆ ಎನ್ನುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿಕೆ ವಿರುದ್ಧ ಕಿಡಿಕಾರಿದ ಡಿ.ಕೆ ಶಿವಕುಮಾರ್‌, ಸಿ.ಟಿ ರವಿ ವಿರುದ್ಧ ಡಿಸಿಪಿ ಹಾಗೂ ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ದೂರು ನೀಡಲಿದೆ. ಸಿ.ಟಿ ರವಿ ಚುನಾವಣೆ ಸಮಯದಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಭ್ರಷ್ಟಾಚಾರ, ಮತ ಕಳವು, ದಿವಾಳಿ ಆಡಳಿತ ಮುಚ್ಚಿಟ್ಟುಕೊಳ್ಳಲು ಸಿ.ಟಿ ರವಿ ಈ ರೀತಿಯ ಹೇಳಿಕೆ ನೀಡುತ್ತಾರೆ. ಈ ಬಗ್ಗೆ ದೂರು ದಾಖಲಿಸಲಾಗುತ್ತದೆ ಎಂದು ಹೇಳಿದರು.

KPCC President D.K Shivakumar Lashes Out At BJP Leaders

ನಮಗೆ ರಾಜ್ಯದ ಜನತೆ ಖುಷಿ ಪಡಿಸಬೇಕು. ಆ ‌ನಿಟ್ಟಿನಲ್ಲಿ ಅಧಿಕಾರಕ್ಕೆ ಬರಬೇಕು. ಹೀಗಾಗಿ ಜನರಿಗೆ ಉತ್ತಮ ಆಡಳಿತ ನೀಡಲು ನಾವು ಅಧಿಕಾರ ಹಿಡಿಯಬೇಕು. ಉತ್ತಮ ಆಡಳಿತ ನೀಡುವ ಭರವಸೆಯನ್ನು ಜನರಿಗೆ ನೀಡುತ್ತಿದ್ದೇವೆ ಎಂದರು.

ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಕತ್ತರಿ: ಆರೋಪಿ ಬಂಧನ

ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಚಿತ್ರದುರ್ಗ ಭೇಟಿ ವೇಳೆ ಖದೀಮನೊಬ್ಬ ತಮ್ಮ ಕೈಚಳಕ ತೋರಿಸಿದ ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗೆರೆಯ ಹೆಲಿಪ್ಯಾಡ್ ಬಳಿ ನಡೆದಿದೆ. ಡಿ.ಕೆ ಶಿವಕುಮಾರ್‌ಗಾಗಿ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಕಾಯುತ್ತಿದ್ದರು. ಈ ವೇಳೆ ಖದೀಮನೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಕತ್ತರಿ ಹಾಕಿದ್ದಾನೆ.

KPCC President D.K Shivakumar Lashes Out At BJP Leaders

ಕಾಂಗ್ರೆಸ್‌ ಮುಖಂಡ ವಿಶ್ವನಾಥ್ ರೆಡ್ಡಿ ಅವರ 10 ಸಾವಿರ ರೂಪಾಯಿ, ಮತ್ತೊಬ್ಬ ಕಾರ್ಯಕರ್ತನ 6 ಸಾವಿರ ರೂಪಾಯಿ, ಚಂದ್ರಣ್ಣ ಎನ್ನುವವರ ನಾಲ್ಕು ಚೆಕ್ ಸೇರಿದಂತೆ ಒಂದು ಪತ್ರ ಕಳ್ಳತನವಾಗಿತ್ತು. ಸ್ಥಳದಲ್ಲಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಕಳ್ಳನ ವರ್ತನೆ ಕಂಡು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಈ ಘಟನೆ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

English summary
KPCC president D.K Shivakumar Lashes out at BJP leaders C.T Ravi and Minister Sriramulu
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X