ಹೆಣದಲ್ಲೂ ಹಣ ಲೂಟಿ ಹೊಡೆಯುವ ಸರ್ಕಾರವಿದು: ಡಿಕೆಶಿ ವಾಗ್ದಾಳಿ
ಚಿತ್ರದುರ್ಗ, ಜೂನ್ 12: ""ಮಹಾಮಾರಿ ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದು, ಅನೇಕ ಸಾವು- ನೋವುಂಟಾದ ಹಿನ್ನೆಲೆಯಲ್ಲಿ ಹೆಣ ಸುಡುವುದಕ್ಕೂ ಸರದಿ, ಆಸ್ಪತ್ರೆ ಸೇರುವುದಕ್ಕೂ ಸರದಿ, ಬೆಡ್‌ಗಳಿಗೂ ಸರದಿ ನಿಲ್ಲುವಂತಾಯ್ತು'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
Recommended Video
"ಔಷಧಿ ಹಾಗೂ ಲಸಿಕೆ ಪಡೆಯಲು ಜನರನ್ನು ಸರದಿ ಸಾಲಿನಲ್ಲಿ ನಿಲ್ಲಿಸಿರುವ ಬಿಜೆಪಿ ಸರ್ಕಾರ, ಇನ್ನೇನು ಜನರನ್ನು ಕಾಪಾಡಿದೆ. ಹೆಣದಲ್ಲೂ ಹಣ ಲೂಟಿ ಮಾಡುವ ಸರ್ಕಾರವಿದು. ದೇಶಕ್ಕೆ ಕೊರೊನಾ ಖಾಯಿಲೆ ತಂದದ್ದು ಯಾರು? ನಾವು ತಂದಿದ್ದೇವಾ?'' ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ""ನಿನ್ನೆ ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಿದ್ದೇವೆ. ನಾಳೆ ಹೋಬಳಿ, ಜಿಲ್ಲಾ ಪಂಚಾಯಿತಿ ಕೇಂದ್ರಗಳಲ್ಲಿ, ನಾಡಿದ್ದು ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಉಳಿದಂತೆ ಐದು ದಿನ ಐದು ಸಾವಿರ ಕಡೆ ಪೆಟ್ರೋಲ್ ಬಂಕ್‌ಗಳಲ್ಲಿ ಪ್ರತಿಭಟನೆ ಮಾಡಲಾಗುವುದು'' ಎಂದು ತಿಳಿಸಿದರು.

ಇದು ಕೇವಲ ಕಾಂಗ್ರೆಸ್ ಕಾರ್ಯಕ್ರಮ ಅಲ್ಲ. ಬಿಜೆಪಿ, ಜನತಾದಳದ ಎಲ್ಲ ನೊಂದ ಜನರ ಕಾರ್ಯಕ್ರಮವಾಗಿದೆ. ಇದೊಂದೇ ವರ್ಷದಲ್ಲಿ 18 ಬಾರಿ ಬೆಲೆ ಏರಿಕೆ ಕಂಡಿದೆ. ಪೆಟ್ರೋಲ್ ಬೆಲೆ 100 ರೂಪಾಯಿ ಮುಟ್ಟಿರುವುದೇ ದೊಡ್ಡ ಸಾಧನೆಯಾಗಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಹರಿಹಾಯ್ದರು. ""ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿ.ಎಸ್ ಯಡಿಯೂರಪ್ಪ ಅವರೇ, ಪೆಟ್ರೋಲ್ ಬೆಲೆ ಏರಿಸಿದ್ರಿ, ಆದರೆ ರೈತರಿಗೆ ಬೆಂಬಲ ಬೆಲೆ ಏರಿಸಿದ್ರಾ? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದರು. ಜನ ಬಿಜೆಪಿ ಸರ್ಕಾರಕ್ಕೆ ಉಗಿಯುತ್ತಿದ್ದಾರೆ'' ಎಂದು ವ್ಯಂಗ್ಯವಾಡಿದರು. ಇನ್ನು ಸಿಎಂ ಬದಲಾವಣೆ ವಿಷಯ ಪ್ರತಿಕ್ರಿಯೆ ನೀಡಿದ ಡಿಕೆಶಿ, ""ಅವರು ತೋರಿಸುವ ಸಿನಿಮಾ ನೋಡುತ್ತೇವೆ'' ಎಂದರು.
ಸಾಮಾಜಿಕ ಅಂತರ ಮಾಯ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಂದ ಹಿನ್ನೆಲೆ, ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಹಾಗೂ ಪ್ರತಿಭಟನಾ ಸ್ಥಳದಲ್ಲಿ ಸಾಮಾಜಿಕ ಅಂತರ ನಿಯಮ ಉಲ್ಲಂಘನೆ ಮಾಡಿದ್ದಾರೆ. ರಾಕ್ ಮಂಜು ಮನೆಗೆ ಉಪಹಾರಕ್ಕೆ ಬಂದ ಡಿಕೆಶಿಯವರನ್ನು ಕಾಂಗ್ರೆಸ್ ಕಾರ್ಯಕರ್ತರು ಮುಗಿಬಿದ್ದರು.

ಕಾರ್ಯಕರ್ತರನ್ನು ಹೊರಹಾಕಲು ಪೊಲೀಸರು ಹರಸಾಹಸ ಪಡಬೇಕಾಯಿತು. ಈ ಪ್ರತಿಭಟನೆಯಲ್ಲಿ ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಡಿ. ಸುಧಾಕರ್, ಹಾಲಿ ಶಾಸಕ ಟಿ. ರಘುಮೂರ್ತಿ, ಜಿ.ಎಸ್. ಮಂಜುನಾಥ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications