ಭೂ ಕಬಳಿಕೆ, ಜಾತಿ ನಿಂದನೆ ಆರೋಪ: ಸಚಿವ ಡಿ.ಸುಧಾಕರ್ ಸೇರಿದಂತೆ ಮೂವರ ವಿರುದ್ಧ FIR ದಾಖಲು
ಚಿತ್ರದುರ್ಗ, ಸೆಪ್ಟೆಂಬರ್, 11: ಭೂ ಕಬಳಿಕೆ, ಜಾತಿ ನಿಂದನೆ ಆರೋಪದಡಿಯಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾಂಖ್ಯಿಕ ಮತ್ತು ಯೋಜನೆ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಲ್ಲೆ, ವಂಚನೆ ಹಾಗೂ ದೌರ್ಜನ್ಯ ಆರೋಪದ ಅಡಿಯಲ್ಲಿ ಸಚಿವ ಡಿ.ಸುಧಾಕರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿರುವುದು ಕೇಳಿಬಂದಿದೆ. ಸಚಿವ ಡಿ.ಸುಧಾಕರ್, ಭಾಗ್ಯಮ್ಮ ಮತ್ತು ಶ್ರೀನಿವಾಸ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸೆವೆನ್ ಹೀಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಪಾಲುದಾರಿಕೆ ಹೊಂದಿರುವ ಸುಧಾಕರ್ ಅವರು ಮೋಸದಿಂದ ದಲಿತರ ಆಸ್ತಿ ಕಬಳಿಕೆ ಮಾಡಿದ್ದಾರೆಂದು ಆರೋಪಿಸಿ ಸುಬ್ಬಮ್ಮ ಎಂಬುವವರು ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಯಲಹಂಕ ಗ್ರಾಮದ ಸರ್ವೇ ನಂಬರ್ 108/1ರ ಜಮೀನನ್ನು ಮೋಸದಿಂದ ಕಬಳಿಕೆ ಮಾಡಲಾಗಿದೆ. ಈ ಪ್ರಕರಣ ಕೋರ್ಟ್‌ನಲ್ಲಿ ಇದ್ದು, ಗುಂಪು ಕಟ್ಟಿಕೊಂಡು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಮನೆಯಲ್ಲಿದ್ದ ಮಗಳ ಮೇಲೆ ಕೂಡ ಹಲ್ಲೆ ಮಾಡಿದ್ದಾರೆ ಎಂದು ಮತ್ತೊಂದು ಆರೋಪ ಮಾಡಿದ್ದಾರೆ.












Click it and Unblock the Notifications