• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿರಿಯೂರಿನಲ್ಲಿ ಬೈಕ್ ಅಪಘಾತ; ಉಪನ್ಯಾಸಕ ಸಾವು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮೇ 06: ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಉಪನ್ಯಾಸಕರೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಹಿರಿಯೂರಿನಲ್ಲಿ ನಡೆದಿದೆ. ಸಾವಿಗೀಡಾದವರನ್ನು ಶ್ರೀನಿವಾಸ್ (45) ಎಂದು ಗುರುತಿಸಲಾಗಿದೆ.

ನಗರದ ಹರಿಶ್ಚಂದ್ರ ಘಾಟ್ ಬಳಿ ಘಟನೆ ನಡೆದಿದೆ. ಶ್ರೀನಿವಾಸ್ ಅವರು ನಗರದ ಹೊರ ವಲಯದಲ್ಲಿರುವ ಸರ್ಕಾರಿ ವೇದಾವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಹತ್ತು ವರ್ಷಗಳಿಂದ ಗಣಿತ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಇಂದು ಕಾಲೇಜಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಈ ಘಟನೆ ನಡೆದಿದೆ. ಕಾಲೇಜು ಸಮೀಪದಲ್ಲೇ ಈ ದುರ್ಘಟನೆ ಸಂಭವಿಸಿದೆ. ಹಿರಿಯೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

English summary
Lecturer of government vedavathi first grade college srinivas died in an accident today morning in hiriyur of chitradurga
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X