• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿರಿಯೂರು; ಬೋನಿಗೆ ಬಿದ್ದ ಆತಂಕ ಮೂಡಿಸಿದ್ದ ಚಿರತೆ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಫೆಬ್ರವರಿ 10: ಚಿತ್ರದುರ್ಗ ಜಿಲ್ಲೆಯ ಹೊಸಳ್ಳಿ-ದುಗ್ಗಾಣಿಹಟ್ಟಿ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಎರಡು ದಿನಗಳ ಹಿಂದೆ ಹೊಸಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಬಳಿಕ ರಸ್ತೆ ಪಕ್ಕದಲ್ಲಿ ಚಿರತೆ ಮಲಗಿರುವುದನ್ನು ಗ್ರಾಮಸ್ಥರ ನೀಡಿದ್ದರು. ಮೊಬೈಲ್‌ನಲ್ಲಿ ಚಿರತೆ ಮಲಗಿರುವ ಪ್ರದೇಶದ ದೃಶ್ಯವನ್ನು ಸೆರೆ ಹಿಡಿದಿದ್ದರು.

ಶೌಚಾಲಯದಿಂದ ಚಿರತೆ ಪರಾರಿ, ಜೀವ ಉಳಿಸಿಕೊಂಡ ನಾಯಿ!

ಹೊಸಳ್ಳಿ ಸುತ್ತಮುತ್ತಲಿನ ಗ್ರಾಮದ ಜನರಲ್ಲಿ ಈ ಚಿರತೆ ಆತಂಕ ಮೂಡಿಸಿತ್ತು. ಅರಣ್ಯ ಪ್ರದೇಶದ ಬಳಿ ಚಿರತೆ ಪ್ರತ್ಯಕ್ಷವಾಗಿರುವ ಕುರಿತಾಗಿ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಮನವಿಯನ್ನು ಮಾಡಿದ್ದರು.

ವೈರಲ್ ಫೋಟೋ; ಶೌಚಾಲಯದಲ್ಲಿ ಬಂಧಿಯಾದ ಚಿರತೆ, ನಾಯಿ!

ಮಂಗಳವಾರ ಸಂಜೆ ಹೊಲದಲ್ಲಿ ಮೇಯುತ್ತಿದ್ದ ಮೇಕೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿತ್ತು. ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಅಳವಡಿಕೆ ಮಾಡಿದ್ದರು.

ಬೆಂಗಳೂರು ಜನರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ !

ಬುಧವಾರ ಚಿರತೆ ಬೋನಿನಲ್ಲಿ ಸೆರೆಯಾಗಿದ್ದು, ಹೊಸಳ್ಳಿ ಗ್ರಾಮ ಮತ್ತು ಸುತ್ತಮುತ್ತಲಿನ ಗ್ರಾಮದ ಜನರು ನಿಟ್ಟಿಸಿರು ಬಿಟ್ಟಿದ್ದಾರೆ. ಚಿರತೆಗಳು ಇಲ್ಲಿ ಆಗಾಗ ಪ್ರತ್ಯಕ್ಷವಾಗುತ್ತಿವೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಜನರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

   ಶಿಕ್ಷಣ ಸಚಿವರಿಂದ ಮಹತ್ವದ ನಿರ್ಧಾರ! | Oneindia Kannada

   English summary
   A leopard that found in Dugganihatti Hiriyur taluk of Chitradurga district finally was captured by forest department officials on February 10, 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X