ಚಿತ್ರದುರ್ಗದಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಪೈಪೋಟಿ, ಪಟ್ಟಿ
ಚಿತ್ರದುರ್ಗ, ಮಾರ್ಚ್ 28 : ಚಿತ್ರದುರ್ಗ ಜಿಲ್ಲೆಯಲ್ಲಿ 2018ರ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಯಾರಿಗೆ? ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಎಚ್.ಆಂಜನೇಯ ಜೊತೆ ಸಭೆ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಭೆ ನಡೆಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ಅವರನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.

ಜಿಲ್ಲೆಯ ಕೆಲವು ಕ್ಷೇತ್ರಗಳಿಗೆ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಇರುವುದರಿಂದ ಎರಡು ಹೆಸರುಗಳನ್ನು ಸ್ಕ್ರೀನಿಂಗ್ ಕಮಿಟಿಗೆ ಶಿಫಾರಸು ಮಾಡಲು ನಿರ್ಣಯ ಕೈಗೊಳ್ಳಲಾಯಿತು.
ಸಿದ್ದರಾಮಯ್ಯ ಅವರು ಎಚ್.ಆಂಜನೇಯ ಅವರ ಜೊತೆ ಸಭೆ ನಡೆಸಿದರು. ಜಿಲ್ಲೆಯ ನಾಯಕರಲ್ಲಿ ಒಗ್ಗಟ್ಟು ಮೂಡಿಸಲು ವಿಫಲವಾಗಿದ್ದೀಯಾ? ಎಂದು ಸಿದ್ದರಾಮಯ್ಯ ಅವರು ಆಂಜನೇಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್?
ಮೊಳಕಾಲ್ಮೂರು : ಶಶಿ ಕುಮಾರ್, ಉಗ್ರಪ್ಪ
ಚಳ್ಳಕೆರೆ : ಕೆ.ರಘುಮೂರ್ತಿ
ಚಿತ್ರದುರ್ಗ : ರಘು ಆಚಾರ್, ಭಾವನಾ
ಹೊಳಲ್ಕೆರೆ : ಎಚ್. ಆಂಜನೇಯ ಹೆಸರನ್ನು ಶಿಫಾರಸು ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.












Click it and Unblock the Notifications