ಸಾರ್ವಜನಿಕ ಜಾಗದಲ್ಲಿ ಉಗುಳಿದರೆ 1000ರೂ ದಂಡ: ಚಿತ್ರದುರ್ಗ ಡಿಸಿ ಆದೇಶ

ಚಿತ್ರದುರ್ಗ, ಏಪ್ರಿಲ್ 16: ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಆದೇಶಿಸಿದ್ದಾರೆ.

ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈ ಆದೇಶ ಹೊರಡಿಸಿದ್ದಾರೆ. ಯಾರು ಈ ಆದೇಶವನ್ನು ಉಲ್ಲಂಘಿಸುತ್ತಾರೋ ಅಂಥವರ ವಿರುದ್ಧ ಗರಿಷ್ಠ 1000 ರೂ. ವರೆಗೆ ದಂಡ ಹಾಗೂ ಕಾನೂನು ರೀತ್ಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Lockdown Guidelines ‍Chitradurga DC Ordered 1000 Fine For Spitting In Public Places

ಕೊರೊನಾ ಸೋಂಕು ತಡೆ ಹಾಗೂ ನಿಯಂತ್ರಣ ಉದ್ದೇಶಕ್ಕಾಗಿ ಲಾಕ್ ಡೌನ್ ಜಾರಿಯಲ್ಲಿದೆ. ಅಲ್ಲದೆ ಸೋಂಕು ಹರಡುವುದನ್ನು ತಡೆಗಟ್ಟಲು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಕೂಡ ನಿರ್ಬಂಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಾದ ವಸತಿ ನಿಲಯಗಳು, ಆಸ್ಪತ್ರೆ ಕಟ್ಟಡಗಳು, ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣ, ಸರ್ಕಾರಿ ಕಚೇರಿಗಳು, ಹೋಟೆಲ್ ಗಳು, ನ್ಯಾಯಾಲಯ ಕಟ್ಟಡಗಳು, ಶಾಲಾ ಕಾಲೇಜು ಕಟ್ಟಡಗಳು, ಗ್ರಂಥಾಲಯ, ಪಾರ್ಕ್ ಗಳು, ಸೇರಿದಂತೆ ಜನಸಂದಣಿ ಸೇರುವ ಎಲ್ಲ ಸ್ಥಳಗಳಲ್ಲಿ ಉಗುಳುವುದನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+