ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗವನ್ನು ಕೈವಶ ಮಾಡಿಕೊಂಡ ಚಂದ್ರಪ್ಪ

|
Google Oneindia Kannada News

ಚಿತ್ರದುರ್ಗ, ಮೇ 19 : ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್‌.­ಚಂದ್ರಪ್ಪ ಅವರು ಕ್ಷೇತ್ರದವರಲ್ಲ, ಹೊರಗಿನವರಿಗೆ ಟಿಕೆಟ್ ನೀಡಿದ್ದು ಏಕೆ? ಎಂದು ಪ್ರಶ್ನಿಸುತ್ತಿದ್ದವರಿಗೆ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಚಂದ್ರಪ್ಪ ಉತ್ತರ ನಿಡಿದ್ದಾರೆ.

ಚಿತ್ರದುರ್ಗ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಬಿಜೆಪಿಗೆ ಶಾಕ್ ನೀಡಿದೆ. ಕ್ಷೇತ್ರದ ಹಾಲಿ ಸಂಸದರಾಗಿದ್ದ ಜನಾರ್ದನ ಸ್ವಾಮಿ ಅವರನ್ನು ಸೋಲಿಸುವ ಮೂಲಕ ಚಂದ್ರಪ್ಪ ಅವರು, ಕಾಂಗ್ರೆಸ್ ಪಕ್ಷಕ್ಕೆ ಒಂದು ಸ್ಥಾನವನ್ನು ರಾಜ್ಯದಲ್ಲಿ ತಂದುಕೊಟ್ಟಿದ್ದಾರೆ. ಬಿಜೆಪಿ ಕೈಯಿಂದ ಒಂದು ಕ್ಷೇತ್ರವನ್ನು ಕಿತ್ತುಕೊಂಡಿದ್ದಾರೆ.

BN Chandrappa

ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ಹಿಂದೆ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರ ಶ್ರಮವಿದೆ. ತಾವೇ ಅಭ್ಯರ್ಥಿ ಎಂಬಂತೆ ಕೆಲಸ ಮಾಡಿದ ಸಚಿವ ಆಂಜನೇಯ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ ಎಂದು ಪಕ್ಷದ ಹೈಕಮಾಂಡ್ ನಾಯಕರಿಗೆ ನೀಡಿದ ಮಾತನ್ನು ಉಳಿಸಿಕೊಂಡಿದ್ದಾರೆ. [ಮೊದಲ ಬಾರಿ ಸಂಸತ್ ಪ್ರವೇಶಿಸಿದ ಚಂದ್ರಪ್ಪ]

ಮೂಲತಃ ಚಿಕ್ಕಮಗಳೂರಿನ ಮೂಡಿಗೆರೆಯವರಾದ ಬಿ.ಎನ್.ಚಂದ್ರಪ್ಪ ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಲೋಕಸಭೆ ಚುನಾವಣೆಗೆ ಮೊದಲ ಬಾರಿ ಸ್ಪರ್ಧಿಸಿದ್ದ ಅವರು ಸಂಸತ್ ಪ್ರವೇಶಿಸಿದ್ದಾರೆ. ಎರಡು ಬಾರಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಅವರು ಸೋಲು ಅನುಭವಿಸಿದ್ದರು. ಸದ್ಯ ನೇರವಾಗಿ ಲೋಕಸಭೆ ಪ್ರವೇಶ ಪಡೆದಿದ್ದಾರೆ. ಚಿತ್ರದುರ್ಗ ಕ್ಷೇತ್ರದ ಫಲಿತಾಂಶ ಹೀಗಿದೆ. [ಕರ್ನಾಟಕದಲ್ಲಿ ಸೋತು ಗೆದ್ದವರು]

ಚಿತ್ರದುರ್ಗ ಪಡೆದ ಸ್ಥಾನ ಪಕ್ಷ ಪಡೆದ ಮತಗಳು
ಬಿ.ಎನ್.ಚಂದ್ರಪ್ಪ 1
ಕಾಂಗ್ರೆಸ್ 4,47,511
ಜನಾರ್ದನ ಸ್ವಾಮಿ
2
ಬಿಜೆಪಿ 3,66,226
ಗೂಳಿಹಟ್ಟಿ ಶೇಖರ್
3
ಜೆಡಿಎಸ್ 2,02,108
ಮೋಹನ್ ದಾಸರಿ
4
ಎಎಪಿ
1,42,26
English summary
Lok Sabha Election results 2014, Karnataka : Congress candidate BN Chandrappa wins in Chitradurga Lok Sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X