ಚಿತ್ರದುರ್ಗ: ₹10,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಡಿಎಲ್ಆರ್
ಚಿತ್ರದುರ್ಗ, ಫೆಬ್ರವರಿ, 02: ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಕಛೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಲಂಚ ಪಡೆಯುತ್ತಿದ್ದಾಗ ಎಡಿಎಲ್‌ಆರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರೈತನ ಜಮೀನಿಗೆ ಸಂಬಂಧಿಸಿದಂತೆ ದಾಖಲೆ ಹಾಗೂ ಪಹಣಿ ನೀಡಲು 15ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, 10 ಸಾವಿರ ಲಂಚ ಪಡೆಯುತ್ತಿದ್ದಾಗ ಎಡಿಎಲ್ ಆರ್.ಗಂಗಣ್ಣ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ರೈತ ಕೆ.ಜಿ.ಜಯ್ಯಣ್ಣ ತಮ್ಮ ಜಮೀನಿಗೆ ಸಂಭಂದಿಸಿದಂತೆ ದಾಖಲೆಗಳನ್ನು ಪ್ರತ್ಯೇಕವಾಗಿ ಮಾಡಿಕೊಡಲು ಗಂಗಣ್ಣ 15,000 ರೂಪಾಯಿ ಹಣ ಕೇಳಿದ್ದರು. ಲಂಚ ಕೇಳಿರುವ ಬಗ್ಗೆ ರೈತ ಜಯಣ್ಣ ಲೋಕಾಯುಕ್ತರಿಗೆ ದೂರು ನೀಡಿದ್ದರು.
ಈ ದೂರಿನನ್ವಯ ಲೋಕಾಯುಕ್ತ ಪೊಲೀಸರು ಇಂದು ಕಾರಿನ ಚಾಲಕ ಕಿರಣ್ ಎಂಬುವವರು ಜಯಣ್ಣನಿಂದ 10 ಸಾವಿರ ರೂಪಾಯಿ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.












Click it and Unblock the Notifications