ಹಿರಿಯೂರು: ₹5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಸದಸ್ಯ
ಚಿತ್ರದುರ್ಗ, ಜನವರಿ, 02: ನಗರಸಭಾ ಸದಸ್ಯರೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ನಗರಸಭೆ ಪಕ್ಷೇತರ ಸದಸ್ಯ ಎಂ.ಡಿ.ಸಣ್ಣಪ್ಪ ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿಯಾಗಿದ್ದು, ಜೊತೆಗೆ ನಗರಸಭೆ (ಎಸ್‌ಡಿಸಿ) ಕ್ಲರ್ಕ್ ರಮೇಶ್ ಕೂಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರಸಭೆ ಸದಸ್ಯ ಎಂಡಿ ಸಣ್ಣಪ್ಪ ಅವರು ಇ-ಸ್ವತ್ತು ಮಾಡಿಸಿಕೊಡಲು ವ್ಯಕ್ತಿಯೊಬ್ಬರ ಬಳಿ 5 ಸಾವಿರ ರೂಪಾಯಿ ಲಂಚ ಕೇಳಿದ್ದರು. ಇಂದು ಇವರು ಲಂಚ ಸ್ವೀಕಾರದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಪಿ.ನಟರಾಜು ಮನೆಯ ಇ-ಸ್ವತ್ತಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿದ್ದರು. ಹಿರಿಯೂರು ಬಸ್ ನಿಲ್ದಾಣದ ಬಳಿ ನಗರಸಭೆ ಸದಸ್ಯ ಸಣ್ಣಪ್ಪ, ಕ್ಲರ್ಕ್ ರಮೇಶ್ ಲಂಚ ಸ್ವೀಕಾರ ಮಾಡುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.












Click it and Unblock the Notifications