Get Updates
Get notified of breaking news, exclusive insights, and must-see stories!

ಚಿತ್ರದುರ್ಗ: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಗ್ರಾಮ ಲೆಕ್ಕಾಧಿಕಾರಿ ಬಲೆಗೆ

ಚಿತ್ರದುರ್ಗ, ನವೆಂಬರ್, 20: ಪೌತಿ ಖಾತೆ ಮಾಡಿ ಕೊಡಲು ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬುಧವಾರ (ನವೆಂಬರ್ 20) ನಡೆದಿದೆ. ಹಾಗಾದರೆ ಎಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೆಲಗೇಲತಹಟ್ಟಿ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾನೆ. ಕಚೇರಿಯಲ್ಲಿ 10,000 ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದಾನೆ. ಗ್ರಾಮದ ಚನ್ನಕೇಶವಯ್ಯ ಎಂಬುವವರಿಂದ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದಿದ್ದಾನೆ. ಗ್ರಾಮ ಲೆಕ್ಕಾಧಿಕಾರಿಗೆ ಸಹಕಾರ ನೀಡಿದ್ದ ಖಾಸಗಿ ವ್ಯಕ್ತಿ ಬೋರೇಶ್ ಅವರನ್ನು ಸಹ ಬಂಧಿಸಲಾಗಿದೆ.

Lokayukta Raid on Village Accountant While Accepting Bribe in Chitradurga district

ಲೋಕಾಯುಕ್ತ ಎಸ್‌ಪಿ ವಾಸುದೇವ್ ರಾವ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ತನಿಖೆ ಮುಂದುವರೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

40 ಸಾವಿರ ಲಂಚ ಸ್ವೀಕಾರ: ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ 4,00,000 ರೂಪಾಯಿ ಲಂಚ ಸ್ವೀಕರಿಸುವಾಗ ಇತ್ತೀಚೆಗಷ್ಟೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದರು.

ಗುತ್ತಿಗೆದಾರನ ಕಾಮಗಾರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಗುತ್ತಿಗೆದಾರ ಸಿದ್ದನಗೌಡನಿಂದ 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯನ್ನು ಬಲೆಗೆ ಕೆಡವಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ದಾಳಿಯನ್ನು ಲೋಕಾಯುಕ್ತ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ನಡೆಸಲಾಗಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಎಡಿಎಲ್‌ಆರ್ ಲೋಕಾಯುಕ್ತ ಬಲೆಗೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಕಛೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಲಂಚ ಪಡೆಯುತ್ತಿದ್ದಾಗ ಎಡಿಎಲ್‌ಆರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಘಟನೆ ನಡೆದಿತ್ತು.

ರೈತನ ಜಮೀನಿಗೆ ಸಂಬಂಧಿಸಿದಂತೆ ದಾಖಲೆ ಹಾಗೂ ಪಹಣಿ ನೀಡಲು 15ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, 10 ಸಾವಿರ ಲಂಚ ಪಡೆಯುತ್ತಿದ್ದಾಗ ಎಡಿಎಲ್ ಆರ್.ಗಂಗಣ್ಣ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.

ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ರೈತ ಕೆ.ಜಿ.ಜಯ್ಯಣ್ಣ ತಮ್ಮ ಜಮೀನಿಗೆ ಸಂಭಂದಿಸಿದಂತೆ ದಾಖಲೆಗಳನ್ನು ಪ್ರತ್ಯೇಕವಾಗಿ ಮಾಡಿಕೊಡಲು ಗಂಗಣ್ಣ 15,000 ರೂಪಾಯಿ ಹಣ ಕೇಳಿದ್ದರು. ಲಂಚ ಕೇಳಿರುವ ಬಗ್ಗೆ ರೈತ ಜಯಣ್ಣ ಲೋಕಾಯುಕ್ತರಿಗೆ ದೂರು ನೀಡಿದ್ದರು.

ಲಂಚ ಕೇಳಿದ ಅಧಿಕಾರಿ ಅಮಾನತು: ಈ ದೂರಿನನ್ವಯ ಲೋಕಾಯುಕ್ತ ಪೊಲೀಸರು ಇಂದು ಕಾರಿನ ಚಾಲಕ ಕಿರಣ್ ಎಂಬುವವರು ಜಯಣ್ಣನಿಂದ 10 ಸಾವಿರ ರೂಪಾಯಿ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+