ಹಿರಿಯೂರು ಬಳಿ ರಸ್ತೆ ಮಧ್ಯೆ ಹೊತ್ತು ಉರಿದ ಲಾರಿ; ಮೆಕ್ಕೆಜೋಳ ಭಸ್ಮ
ಚಿತ್ರದುರ್ಗ, ಮೇ 05: ಮೆಕ್ಕೆಜೋಳ ತುಂಬಿಕೊಂಡು ಚಲಿಸುತ್ತಿದ್ದ ಲಾರಿಯ ಟೈರ್ ಸಿಡಿದು ಬೆಂಕಿ ತಗುಲಿದ ಪರಿಣಾಮವಾಗಿ ಮೆಕ್ಕೆಜೋಳ ಸುಟ್ಟು ಭಸ್ಮವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್ ರಾಷ್ಟ್ರೀಯ ಹೆದ್ದಾರಿ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಚಿತ್ರದುರ್ಗದಿಂದ ತುಮಕೂರು ಕಡೆಗೆ ಹೋಗುವಾಗ ಲಾರಿ ಟೈರ್ ಸಿಡಿದಿದೆ.

ಲಾರಿಗೆ ಬೆಂಕಿ ತಗುಲಿರುವುದು ಗಮನಕ್ಕೆ ಬರುತ್ತಿದ್ದಂತೆ ಲಾರಿ ಚಾಲಕ ಗಾಡಿ ನಿಲ್ಲಿಸಿ ಇಳಿದು ಪರಾರಿಯಾಗಿದ್ದಾನೆ. ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಐಮಂಗಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












Click it and Unblock the Notifications