ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುರುಘಾ ಮಠಕ್ಕೆ ಮಹಾಂತರುದ್ರ ಸ್ವಾಮೀಜಿ ತಾತ್ಕಾಲಿಕ ಪೀಠಾಧಿಪತಿ ?

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟಂಬರ್‌ 2: ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪ್ರಸ್ತುತ 14 ನ್ಯಾಯಾಂಗ ಬಂಧನಕ್ಕೊಳಗಾಗಿದ್ದಾರೆ. ಹಾಗಾಗಿ ತಾತ್ಕಾಲಿಕ ಪೀಠಾಧಿಪತಿಯಾಗಿ ದಾವಣಗೆರೆ ತಾಲೂಕಿನ ಹೆಬ್ಬಾಳು ವಿರಕ್ತಮಠದ ಮಹಾಂತರುದ್ರ ಸ್ವಾಮೀಜಿಯನ್ನು ನೇಮಕ ಮಾಡಲಾಗಿದೆ ಎಂಬ ಸುದ್ದಿ ಹಬ್ಬಿದೆ.

ಮಠದ ವಸತಿ ನಿಲಯದಲ್ಲಿನ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಸ್ವಾಮೀಜಿಯ ಮೇಲೆ ಪೋಕ್ಸೋ ಕಾಯ್ದೆ ಮತ್ತು ಆ ಬಾಲಕಿಯರಲ್ಲಿ ಒಬ್ಬಳು ಪರಿಶಿಷ್ಠ ಜಾತಿಗೆ ಸೇರಿದವಳಾಗಿರುವುದರಿಂದ ಅಟ್ರಾಸಿಟಿ ಪ್ರಕರಣ ಕೂಡ ದಾಖಲಾಗಿದೆ. ಇನ್ನೂ ಬಾಲಕಿಯರು ಮೈಸೂರಿನಲ್ಲಿ ದೂರು ನೀಡಿದ 6 ದಿನಗಳ ಬಳಿಕ ಸ್ವಾಮೀಜಿಯನ್ನು ಬಂಧಿಸಲಾಗಿದೆ.

Murugha Mutt Shree : ಚಿತ್ರದುರ್ಗ ಮುರುಘಾ ಶರಣರಿಗೆ 14 ದಿನ ನ್ಯಾಯಾಂಗ ಬಂಧನMurugha Mutt Shree : ಚಿತ್ರದುರ್ಗ ಮುರುಘಾ ಶರಣರಿಗೆ 14 ದಿನ ನ್ಯಾಯಾಂಗ ಬಂಧನ

ಇನ್ನು ಸ್ವಾಮೀಜಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹಿನ್ನಲೆ ಮಹಾಂತರುದ್ರ ಸ್ವಾಮೀಜಿಯನ್ನು ಪ್ರಭಾರ ಪೀಠಾಧಿಪತಿಯಾಗಿ ನೇಮಕ ಮಾಡಲಾಗಿದೆ. ಬಂಧನಕ್ಕೂ ಮುನ್ನ ವಿವಿಧ ಮಠಾಧೀಶರೊಂದಿಗೆ ಹಾಗೂ ಭಕ್ತರೊಂದಿಗೆ ಸತತ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ತಿರ್ಮಾನ ಕೈಗೊಳ್ಳಲಾಗಿದೆ. ಆದರೆ ಈ ಕುರಿತು ಮುರುಘಾ ಮಠದಿಂದ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ. ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ದಾವಣಗೆರೆಯ ಮಹಾಂತರುದ್ರ ಸ್ವಾಮೀಜಿ ಅವರು ಮುರುಘಾ ಶರಣರ ಜೊತೆಗೆ ಇದ್ದರು.

Mahantarudra Swamiji temporary head of Muruga Mutt

ಇನ್ನು ಗುರುವಾರ ರಾತ್ರಿ ಮುರುಘಾ ಮಠಕ್ಕೆ ಬಂದಿದ್ದ ಪೊಲೀಸತ ತನಿಖಾ ತಂಡ, ಮುರುಘಾ ಶರಣರನ್ನು ವಶಕ್ಕೆ ಪಡೆದು ಬಿಗಿ ಭದ್ರತೆಯಲ್ಲಿ ತಮ್ಮೊಂದಿಗೆ ಕರೆದುಕೊಂಡು ಹೋದರು. ಇದಕ್ಕೂ ಮೊದಲು ಪ್ರಕರಣದ ಎರಡನೇ ಆರೋಪಿ ಹಾಸ್ಟೆಲ್‌ ವಾರ್ಡನ್‌ರನ್ನು ಕೂಡ ತನಿಖಾ ತಂಡ ವಶಕ್ಕೆ ಪಡೆದಿದೆ. ಒಟ್ಟು ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರು ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ,ವಿಚಾರಣಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು. ಆಗಸ್ಟ್‌ 26ರಂದು ಮೈಸೂರಿನ ಮಕ್ಕಳ ಕಲ್ಯಾಣ ಸಮಿತಿ ಎದುರು ಮಕ್ಕಳ ಹಾಜರು ಪಡಿಸಿದ ಬಳಿಕ ಅಂದು ರಾತ್ರಿ ನಜರಬಾದ್‌ ಪೊಲೀಸ್‌ ಠಾಣೆಯಲ್ಲಿ ಮುರುಘಾ ಶರಣರು ಸೇರಿ ಐವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

English summary
Follwing the arrest of Shivamurthi Murugha Sahranaru, Davanagere Taluk Hebbaliu Virakth Mutt seer Mahantarudra Swamiji take charge the head of Murugha mutt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X