Chitradurga: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೇಲೆ ಹರಿದ ಲಾರಿ: ಅಪಘಾತದ ಭಯಾನಕ ದೃಶ್ಯ ಸೆರೆ

ಚಿತ್ರದುರ್ಗ, ಆಗಸ್ಟ್‌ 03: ರಸ್ತೆ ದಾಟುತ್ತಿದ್ದ ಪಾದಾಚಾರಿಯ ಮೇಲೆ ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಳಲ್ಕೆರೆ ತಾಲೂಕಿನ ನೂಲೇನೂರು ಬಳಿ ಸಂಭವಿಸಿದೆ. ಮಲ್ಲಿಕಾರ್ಜುನ (52) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಇಂದು ಆಗಸ್ಟ್‌ 03 ಶನಿವಾರ ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ13 ರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ತಿರುಮಲಾಪುರದ ಮಲ್ಲಿಕಾರ್ಜುನ ಮೇಲೆ ಲಾರಿ ಹರಿದಿದೆ. ಅಪಘಾತದ ಭೀಕರತೆಗೆ ಮಲ್ಲಿಕಾರ್ಜುನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Man Dies In Lorry Accident At Chitradurga District Holalkere

ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸರೆಯಾಗಿದ್ದು, ನೋಡುಗರ ಎದೆ ಝಲ್‌ ಎನಿಸುವಂತಿದೆ. ಘಟನೆ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಡಿವೈಡರ್‌ಗೆ ಕಾರು ಡಿಕ್ಕಿ: ಯುವತಿ ಸ್ಥಳದಲ್ಲೇ ಸಾವು

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಂದ್ರ ಬಳಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿದ್ದು, ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತ ಮಹಿಳೆಯನ್ನು ತೋರಣಗಲ್ ಮೂಲದ 18 ವರ್ಷದ ಪಲ್ಲವಿ ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಗಾಯಾಳು ವ್ಯಕ್ತಿಯನ್ನು ಬಳ್ಳಾರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ರಾಂಪುರ ಠಾಣೆ ಪಿಎಸ್‌ಐ ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿತ್ರದುರ್ಗದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಮುಂದುವರಿದಿದ್ದು, ಇತ್ತ ಕೋಟೆನಾಡು ಚಿತ್ರದುರ್ಗದಲ್ಲೂ ಸಹ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಿತ್ರದುರ್ಗ ನಗರದ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಹಾಸನ ಮೂಲದ ವಿದ್ಯಾರ್ಥಿ ಮನೋಜ್(22) ಸಾವಿಗೆ ಶರಣಾಗಿದ್ದಾನೆ. ಬಸವೇಶ್ವರ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು ಮನೋಜ್ ಸಾವನ್ನಪ್ಪಿದ್ದಾನೆ. ಬಸವೇಶ್ವರ ಮೆಡಿಕಲ್ ಕಾಲೇಜಿನ 2ನೇ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮನೋಜ್ ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಕೂಡ ಬರೆದಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+