ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದ ಮುರುಘಾ ಮಠದಲ್ಲಿ ಸೋಮವಾರ ಸಾಮೂಹಿಕ ವಿವಾಹ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್‌, 04: ಚಿತ್ರದುರ್ಗ ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಕರ್ತಗದ್ದುಗೆ ಪೂಜಾ ಕೈಂಕರ್ಯಗಳು, ನಿತ್ಯ ದಾಸೋಹ ಎಂದಿನಂತೆ ನಡೆಯುತ್ತಿದೆ ಹಾಗೂ ಮಠದಲ್ಲಿ ಸೆಪ್ಟಂಬರ್ 5ರಂದು ಸಾಮೂಹಿಕ ವಿವಾಹ ನಡೆಯಲಿದೆ.

ಭಕ್ತಾದಿಗಳು ಎಂದಿನಂತೆ ಸಹಕರಿಸಬೇಕು ಎಂದು ಶ್ರೀಮಠದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುರುಘಾ ಮಠದ ಮುರುಘಾ ಶರಣರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಲಾಗಿದೆ. ಇದರ ನಡುವೆ ಮುರುಘಾ ಮಠದಲ್ಲಿ ಸೆಪ್ಟೆಂಬರ್ 5ರಂದು ಸಾಮೂಹಿಕ ವಿವಾಹ ನಡೆಯಲಿದೆ.

Breaking:ಮುರುಘಾ ಶರಣರನ್ನು 4 ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದ ಕೋರ್ಟ್‌Breaking:ಮುರುಘಾ ಶರಣರನ್ನು 4 ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದ ಕೋರ್ಟ್‌

ಪ್ರತಿ ತಿಂಗಳ ದಿನಾಂಕ 5ರಂದು ಮಠದಲ್ಲಿ ನಡೆಯುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ಯಾವುದೇ ಅಡ್ಡಿ ಆತಂಕಗಳಿಲ್ಲದೆ ಇನ್ಮುಂದೆಯೂ ನಡೆಯಲಿದೆ. ಸೋಮವಾರ ನಡೆಯಲಿರುವ ಸಾಮೂಹಿಕ ವಿವಾಹದಲ್ಲಿ 11 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲು ನೋಂದಣಿ ಮಾಡಿಸಿಕೊಂಡಿದ್ದಾರೆ. ನಿಗದಿಯಂತೆಯೇ ಸೋಮವಾರ ಮಠದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಟಣೆ ತಿಳಿಸಿದೆ.

Mass Marriage At Chitradurga Murugha Mutt On September 5th

ಅನಾಥಸೇವಾಶ್ರಮ ಅಧ್ಯಕ್ಷ ಸ್ಥಾನದಿಂದ ಗೇಟ್‌ ಪಾಸ್‌; ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳ ಬಂಧನವಾಗಿದೆ. ಅನಾಥಸೇವಾಶ್ರಮ ವಿಶ್ವಸ್ಥ ಸಮಿತಿಯು ಮೈಸೂರಿನ ಮಲ್ಲಾಡಿಹಳ್ಳಿಯ ಆಶ್ರಮದ ಅಧೀನದಲ್ಲಿರುವ ಎಂಎಎಸ್‌ವಿಎಸ್ ಗುರುಕುಲ ಪಿಯು ಕಾಲೇಜಿನಲ್ಲಿ ಸಭೆಯನ್ನು ನಡೆಸಿತ್ತು.

Breaking: ಮುರುಘಾ ಮಠ ಲೈಂಗಿಕ ದೌರ್ಜನ್ಯ ಪ್ರಕರಣ: ಎರಡನೇ ಆರೋಪಿ ರಶ್ಮಿ ಬಂಧBreaking: ಮುರುಘಾ ಮಠ ಲೈಂಗಿಕ ದೌರ್ಜನ್ಯ ಪ್ರಕರಣ: ಎರಡನೇ ಆರೋಪಿ ರಶ್ಮಿ ಬಂಧ

ಆಗ ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧನಕ್ಕೊಳಗಾಗಿ ಕ್ರಿಮಿನಲ್ ಆಪಾದನೆಯನ್ನು ಎದುರಿಸುತ್ತಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರನ್ನು ಅನಾಥಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ವಿಮುಕ್ತಿ ಗೊಳಿಸಲಾಗಿದೆ. ವಿಶ್ವಸ್ಥ ಸಮಿತಿ ಸದಸ್ಯತ್ವದಿಂದಲೂ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ವಿಶ್ವಸ್ಥ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮೂವರು ಆರೋಪಿಗಳು ಮಠದಿಂದ ನಾಪತ್ತೆ; ಮುರುಘಾ ಶ್ರೀಗಳ ಬಂಧನದ ಬಳಿಕ ಮೂವರು ಆರೋಪಿಗಳು ನಾಪತ್ತೆ ಆಗಿದ್ದಾರೆ. ಆರೋಪಿಗಳಾದ ಪರಮಶಿವಯ್ಯ, ಗಂಗಾಧರಯ್ಯ ಹಾಗೂ ಓರ್ವ ಬಾಲಾಪರಾಧಿ ಸೇರಿದಂತೆ ಮೂವರು ನಾಪತ್ತೆ ಆಗಿದ್ದು, ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಸ್ವಾಮೀಜಿಗಳ ಬಂಧನ ಆಗುವವರೆಗೂ ಮಠದಲ್ಲೇ ಇದ್ದ ಮೂವರು ಆರೋಪಿಗಳು ಭಯದಿಂದ ನಾಪತ್ತೆ ಆಗಿದ್ದಾರೆ.

Mass Marriage At Chitradurga Murugha Mutt On September 5th

ಮೂವರು ಆರೋಪಿಗಳ ಮನೆಗೆ ಪೊಲೀಸರು ನೋಟಿಸ್ ಕೊಟ್ಟಿದ್ದು, ತಕ್ಷಣ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವ ಆರೋಪಿಗಳ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವು ಸಿಗುತ್ತಿಲ್ಲ. ಹಾಗಾಗಿ ಆರೋಪಿಗಳ ಪತ್ತೆಗೆ ಚಿತ್ರದುರ್ಗದ ಎಸ್‌ಪಿ ಪರಶುರಾಮ್ ತನಿಖಾ ತಂಡ ರಚನೆ ಮಾಡಿದ್ದಾರೆ.

ಎರಡು ತಾಸು ವಿಚಾರಣೆ; ಚಿತ್ರದುರ್ಗದ ಡಿವೈಎಸ್‌ಪಿ ಕಚೇರಿಯಲ್ಲಿ ಮುರುಘಾ ಶ್ರೀಗಳನ್ನು ಶನಿವಾರ ವಿಚಾರಣೆ ನಡೆಸಲಾಗಿತ್ತು. ಎರಡು ತಾಸುಗಳ ಕಾಲ ಡಿವೈಎಸ್‌ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ಮುರುಘಾ ಶ್ರೀಗಳ ವಿಚಾರಣೆ ನಡೆಸಲಾಗಿದೆ. ಬಳಿಕ ಆರೋಗ್ಯ ತಪಾಸಣೆಗಾಗಿ ಡಿವೈಎಸ್‌ಪಿ ಕಚೇರಿಯಿಂದ ನೇರವಾಗಿ ಜಿಲ್ಲಾಸ್ಪತ್ರೆಗೆ ಪೊಲೀಸರು ಕರೆತಂದಿದ್ದಾರೆ.

ಈ ವೇಳೆ ಎಸ್. ಪಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆಯ ಸುತ್ತಮುತ್ತ ಭದ್ರತೆ ಒದಗಿಸಲಾಗಿದೆ. ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ವಿವಿಧ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣ ಎದುರಿಸುತ್ತಿರುವ ಮುರುಘಾ ಶ್ರೀಗಳನ್ನು ಸೋಮವಾರ ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ.

English summary
Sri Mahanta Rudreswara swami of Hebbalu Virakta Mutt said that mass marriage will be held at Murugha Mutt, Chitradurga on September 5th. know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X