ಚಿತ್ರದುರ್ಗದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ-ಡೆತ್ ನೋಟ್‌ನಲ್ಲಿ ಏನಿದೆ?
ಚಿತ್ರದುರ್ಗ, ಆಗಸ್ಟ್, 01: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಮುಂದುವರೆದಿದ್ದು, ಇತ್ತ ಕೋಟೆ ನಾಡು ಚಿತ್ರದುರ್ಗದಲ್ಲೂ ಸಹ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಿತ್ರದುರ್ಗ ನಗರದ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಹಾಸನ ಮೂಲದ ವಿದ್ಯಾರ್ಥಿ ಮನೋಜ್(22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ.

ಬಸವೇಶ್ವರ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಫ್ಯಾನ್‌ಗೆ ಸೀರೆಯಿಂದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಕಾಲೇಜಿನ 2ನೇ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಓದುವ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವಿದ್ಯಾರ್ಥಿ ಆತ್ಮಹತ್ಯೆ: ಹಿರಿಯೂರು ತಾಲೂಕಿನ ಉಡುವಳ್ಳಿ ಬಳಿ ಇರುವ ನವೋದಯ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗಷ್ಟೇ ನಡೆದಿತ್ತು.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದ ಪ್ರೇಮ್ ಸಾಗರ್ (13) ವರ್ಷ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಯು 8ನೇ ತೆರಿಗೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಆದರೆ ಪೋಲಿಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಮೃತ ಯುವಕನ ದೇಹವನ್ನು ನಗರದ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ. ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.












Click it and Unblock the Notifications