ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ತಿಪ್ಪಾರೆಡ್ಡಿಗೆ ನಮ್ಮಿಂದ ಅನ್ಯಾಯವಾಗಿದೆ; ಮಾಜಿ ಸಿಎಂ ಬಿಎಸ್‌ವೈ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಅಕ್ಟೋಬರ್ 19: "ಚಿತ್ರದುರ್ಗ ಜಿಲ್ಲೆಯ ಹಿರಿಯ ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ಸಿಗದೆ ನಮ್ಮಿಂದ ಅನ್ಯಾಯವಾಗಿದೆ,"ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ತಿಪ್ಪಾರೆಡ್ಡಿ ಹಿರಿಯ ಶಾಸಕರಿದ್ದಾರೆ, ಏಳೆಂಟು ಬಾರಿ ಗೆದ್ದಿದ್ದಾರೆ. ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ತಿಪ್ಪಾರೆಡ್ಡಿಗೆ ಮಂತ್ರಿ ಸ್ಥಾನ ನೀಡಲು ಹೇಳುವೆ," ಎಂದು ತಿಳಿಸಿದರು.

ಚಿತ್ರದುರ್ಗದ ಮುರುಘಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಬಿ.ಎಸ್. ಯಡಿಯೂರಪ್ಪ ಶಾಸಕ ತಿಪ್ಪಾರೆಡ್ಡಿ ಮನೆಗೆ ಭೇಟಿ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಪ್ರಚಾರಕ್ಕೆ ತೆರಳುತ್ತಿದ್ದೇನೆ. ಎರಡು ಕ್ಷೇತ್ರದಲ್ಲಿ ವಾತಾವರಣ ಬಿಜೆಪಿ ಪರವಾಗಿದೆ. ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆದರೆ ಹೆಚ್ಚು ಅಂತರದಿಂದ ಗೆಲ್ಲಬೇಕು ಅನ್ನುವ ಇಚ್ಛೆ ಇದೆ," ಎಂದು ತಿಳಿಸಿದರು.

Ministrial Post To GH Tippareddy In The Next Cabinet Expansion: Former CM BS Yediyurappa

"ಪ್ರಧಾನಿ ನರೇಂದ್ರ ಮೋದಿಯವರನ್ನು ರಾಷ್ಟ್ರ ನಾಯಕ ಎಂದು ದೇಶದ ಜನರು ಒಪ್ಪಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದವರು ಹೆಬ್ಬೆಟ್ಟಿನ ಗಿರಾಕಿ ಎಂದು ಮೂದಲಿಸುವುದು ಸರಿಯಲ್ಲ ಎಂದರು. ಈ ರೀತಿಯ ಶಬ್ದಗಳು ಅವರ ಸಂಸ್ಕೃತಿ ತೋರಿಸುತ್ತದೆ," ಎಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎಂದು ಪ್ರಶ್ನಿಸಿದ ಅವರು, "ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಕಾಂಗ್ರೆಸ್ ಪಕ್ಷದಲ್ಲಿ ಪರಸ್ಪರ ಕಚ್ಚಾಟ, ಹೊಡೆದಾಟ ನಡೆಯುತ್ತಿದೆ. ಒಬ್ಬರ ಕಾಲು ಹಿಡಿದು, ಮತ್ತೊಬ್ಬರು ಎಳೆಯುತ್ತಾರೆ," ಎಂದು ಮಾಜಿ ಸಿಎಂ ಬಿಎಸ್‌ವೈ ತಿಳಿಸಿದರು.

"ನಮ್ಮ ಬಿಜೆಪಿ ಸರ್ಕಾರದಲ್ಲಿ ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಪ್ರಧಾನಿ ನರೇಂದ್ರ ಮೋದಿಯವರ ಕೆಲಸಗಳು ಇವೆ. ಬೇರೆ ಪಕ್ಷಗಳನ್ನು ಟೀಕೆ ಮಾಡುವುದಕ್ಕಿಂತ, ನಾವು ಮಾಡಿರುವ ಸಾಧನೆ ಹಿಡಿದು ಮತ ಕೇಳುತ್ತೇವೆ. ಎರಡೂ ಕ್ಷೇತ್ರ ಗೆಲ್ಲುವ ನಿಟ್ಟಿನಲ್ಲಿ‌ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ," ಎಂದು ಮಾತನಾಡಿದರು.

ಇನ್ನು ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕಂಡಿದ್ದು, ಉಪ ಚುನಾವಣೆ ಮುಗಿದ ಬಳಿಕ ದರ ಕಡಿಮೆ ಮಾಡಲು ಸಿಎಂಗೆ ತಿಳಿಸುತ್ತೇನೆ ಎಂದು ಮಾಜಿ ಸಿಎಂ ಬಿಎಸ್‌ವೈ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

Ministrial Post To GH Tippareddy In The Next Cabinet Expansion: Former CM BS Yediyurappa

ಭದ್ರಾ ಯೋಜನೆ ತಂದ ಭಗೀರಥ ಬಿಎಸ್​ವೈ
"ಈ ಭಾಗಕ್ಕೆ ಭದ್ರಾ ಯೋಜನೆ ತಂದ ಭಗೀರಥ ಬಿ.ಎಸ್. ಯಡಿಯೂರಪ್ಪ. ಭದ್ರಾ ಯೋಜನೆ ಈಗ ರಾಷ್ಟ್ರೀಯ ಯೋಜನೆಗೆ ಸೇರುವ ಅಂತಿಮ ಹಂತದಲ್ಲಿದೆ," ಎಂದು ಚಿತ್ರದುರ್ಗ ಶರಣ ಸಂಸ್ಕೃತಿ ಉತ್ಸವದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

"ಜನರ ಬಾಯಾರಿಕೆ, ಭೂತಾಯಿ ಬಾಯಾರಿಕೆ ನೀಗಿಸುವ ಕೆಲಸಕ್ಕೆ ಸರ್ಕಾರ ಬದ್ಧವಾಗಿದೆ. ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರವು ಅಗತ್ಯ ಕ್ರಮ ತೆಗೆದುಕೊಳ್ಳಲಿದೆ. ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್ ಟೌನ್​ಶಿಪ್ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ಈ ಕಾರ್ಯಕ್ಕಾಗಿ 2 ಸಾವಿರ ಎಕರೆ ಭೂಮಿ ಗುರುತಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಮುರುಘಾಶರಣರ ಜನ್ಮದಿನವನ್ನು ಸಮಾನತೆಯ ದಿನವಾಗಿ ಆಚರಿಸಲು ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು," ಎಂದು ಹೇಳಿದರು.

ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಶರಣಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿಂತುಕೊಂಡೇ ಗೌರವ ಸ್ವೀಕರಿಸಿದ ಮುಖ್ಯಮಂತ್ರಿಯ ಸರಳತೆ ಎಲ್ಲರ ಗಮನ ಸೆಳೆಯಿತು.

Recommended Video

9 ಎಸೆತಗಳಲ್ಲಿ 42ರನ್! ಇಂಗ್ಲೆಂಡ್ ಬೌಲರ್ ಗಳಿಗೆ ಬೆವರಿಳಿಸಿದ ಕನ್ನಡಿಗ KL ರಾಹುಲ್ | Oneindia Kannada

English summary
GH Tippareddy is a senior MLA and will be given a ministerial post in the next cabinet expansion, Former CM Yediyurappa said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X