ಚಿತ್ರದುರ್ಗ, ತುಮಕೂರಲ್ಲಿ ಭಾನುವಾರ ಬೆಳಗ್ಗೆ ಭೂಕಂಪ
ಕರ್ನಾಟಕದ ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅನೇಕ ಗ್ರಾಮಗಳಲ್ಲಿ ಭಾನುವಾರ ಬೆಳಗ್ಗೆ ಭೂಕಂಪದ ಅನುಭವಗಳಗಿವೆ. ಬೆಳಗ್ಗೆ 6.45 ರಿಂದ 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ.
ಚಿತ್ರದುರ್ಗ, ಏಪ್ರಿಲ್ 02: ಕರ್ನಾಟಕದ ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅನೇಕ ಗ್ರಾಮಗಳಲ್ಲಿ ಭಾನುವಾರ ಬೆಳಗ್ಗೆ ಭೂಕಂಪದ ಅನುಭವಗಳಾಗಿವೆ. ಬೆಳಗ್ಗೆ 6.45 ರಿಂದ 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಚಿಕ್ಕ ಬ್ಯಾಲದ ಕೆರ, ಬ್ಯಾರಮಡು, ಪಿಲಾಜನಹಳ್ಳಿ, ಕೆಂಚಿಪುರ ಗ್ರಾಮದಲ್ಲಿ ಭೂಕಂಪದ ಅನುಭವವಾಗಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ, ಗಾಣದಾಳು, ಯಗಚಿಹಳ್ಳಿಯಲ್ಲಿ ಕೂಡಾ ಕಂಪನಕ್ಕೆ ಹೆದರಿ ಜನರು ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ.

ಬೆಳಗ್ಗೆ 6.45 ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, 10 ಸೆಕೆಂಡುಗಳ ಕಾಲ ಕಂಪನದ ಅನುಭವವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರಬಂದಿಲ್ಲ.
ರಿಕ್ಚರ್ ಮಾಪಕದಲ್ಲಿ 2.9 ರಷ್ಟು ತೀವ್ರತೆ ಕಂಡು ಬಂದಿದೆ. ಸಾವು, ನೋವು ಸಂಭವಿಸಿದ ವರದಿಗಳು ಬಂದಿಲ್ಲ. ಅನೇಕ ಗ್ರಾಮಗಳಲ್ಲಿ ಹಳೆ ಮನೆಗಳ ಗೋಡೆಗಳು ಕುಸಿದು ಬಿದ್ದಿದೆ. ಭಾರಿ ಪ್ರಮಾಣದಲ್ಲಿ ಸದ್ದು ಕೇಳಿಸಿಕೊಂದ ಜನ ಬೆಚ್ಚಿದ್ದಾರೆ.












Click it and Unblock the Notifications