ಕಾವೇರಿಗಾಗಿ ಕರ್ನಾಟಕ ಬಂದ್‌: ಚಿತ್ರದುರ್ಗದಲ್ಲಿ ಮಿಶ್ರ ಪ್ರತಿಕ್ರಿಯೆ, ಎಂದಿನಂತೆ ಸಾರಿಗೆ ಸೌಲಭ್ಯ

ಚಿತ್ರದುರ್ಗ, ಸಪ್ಟೆಂಬರ್‌ 29: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಇಂದು ಕನ್ನಡಪರ ಸಂಘಟನೆಗಳು ಕರೆ ನೀಡಿದ ಅಖಂಡ ಕರ್ನಾಟಕ ಬಂದ್‌ಗೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಿತ್ರದುರ್ಗ ನಗರದಲ್ಲಿ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಿದರು. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅಣುಕು ಪುಣ್ಯತಿಥಿ ಆಚರಿಸಿದರು. ನಂತರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

karnataka-bandh-in-chitradurga

ಜಿಲ್ಲೆಯ ಜನಜೀವನ ಎಂದಿನಂತಿದ್ದು, ನಗರದಲ್ಲಿ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತರಾಗಿ ಮುಚ್ಚಿದ್ದವು. ಎಂದಿನಂತೆ ಸರ್ಕಾರಿ ಕಚೇರಿಗಳು, ಆಸ್ಪತ್ರೆ ಹಾಗೂ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಹಾಲು, ಔಷಧಿ, ತರಕಾರಿ ಮಾರಾಟ ನಡೆಯಿತು. ಇನ್ನು ಜಿಲ್ಲೆಯಿಂದ ವಿವಿಧ ಭಾಗಗಳಿಗೆ ಕೆಎಸ್ಆರ್‌ಟಿಸಿ ಬಸ್ ಸೇರಿದಂತೆ ಖಾಸಗಿ ಬಸ್‌ಗಳು ಬೆಂಗಳೂರು ಸೇರಿದಂತೆ ಮತ್ತಿತರರ ಭಾಗಗಳಿಗೆ ಸಂಚರಿಸುತ್ತಿದ್ದ ದೃಶ್ಯ ಕಂಡು ಬಂದಿತು.

ಹಿರಿಯೂರಲ್ಲೂ ಕಾವೇರಿಗಾಗಿ ಪ್ರತಿಭಟನೆ ‌

ಇತ್ತ ಜಿಲ್ಲೆಯ ಹಿರಿಯೂರು ನಗರದಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘ ಸೇರಿದಂತೆ ಮತ್ತಿತರರು ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ನಗರದ ಬಿಇಒ ಕಚೇರಿಯಿಂದ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

karnataka-bandh-in-chitradurga

ರಾಜ್ಯದಲ್ಲಿ ಮಳೆ ಇಲ್ಲದೆ ನೀರಿನ ವ್ಯವಸ್ಥೆ ಉಂಟಾಗಿದೆ. ಈಗಿರುವಾಗ ಜಲಾಶಯದಲ್ಲಿ ನೀರು ಇಲ್ಲ. ನೀರು ಬಿಡಲು ಹೇಗೆ ಸಾಧ್ಯ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. ಇದಲ್ಲದೇ ಹೊಳಲ್ಕೆರೆ, ಚಳ್ಳಕೆರೆ, ಮೊಳಕಾಲ್ಮೂರು, ಹೊಸದುರ್ಗದಲ್ಲೂ ಸಹ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಒಟ್ಟಾರೆಯಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಇಂದು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಾದ್ಯಂತ ಮಿಶ್ರ ಪ್ರತಿಕ್ರಿಯೆ ನೀಡಿರುವುದು ಕಂಡು ಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+