ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಬಕಾರಿ ಇಲಾಖೆ ಕಚೇರಿ ಎದುರು ಧರಣಿ ಕುಳಿತ ಶಾಸಕ ಗೂಳಿಹಟ್ಟಿ ಶೇಖರ್

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಅಕ್ಟೋಬರ್ 21: ರಾಜ್ಯ ಸರ್ಕಾರದಿಂದ ಮಂಜೂರಾಗಿದ್ದ MSIL ಅಂಗಡಿಗೆ NOC ನೀಡಲು ವಿಳಂಬವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ಅಬಕಾರಿ ಕಚೇರಿ ಬಾಗಿಲು ಎದುರು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಧರಣಿ ಕುಳಿತಿದ್ದರು.

ಚಿತ್ರದುರ್ಗ ಹೊಸದುರ್ಗ ಪಟ್ಟಣ ಹಾಗೂ ಶ್ರೀರಾಂಪುರ ಗ್ರಾಮಕ್ಕೆ ಕಳೆದ ಎಂಟು ತಿಂಗಳ ಹಿಂದೆ MSIL‌ ಮಂಜೂರಾಗಿತ್ತು. ಇದಕ್ಕೆ NOC ನೀಡದೆ ಶಾಸಕರಿಗೆ ಅಬಕಾರಿ ಡಿಸಿ ನಿರ್ಲಕ್ಷ್ಯ ತೋರಿದ್ದರಿಂದ ಅಬಕಾರಿ ಅಧಿಕಾರಿಗಳ ಕ್ರಮಕ್ಕೆ ಸ್ವತಃ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ಅಬಕಾರಿ ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸತ್ತಾ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಜಿಲ್ಲಾ ಅಬಕಾರಿ ಕಚೇರಿ ಬಳಿ ಧರಣಿ ಕುಳಿತಿದ್ದರು. ಶಾಸಕರ ಧರಣಿ ವಿಷಯ ತಿಳಿದ ಅಬಕಾರಿ ಜಿಲ್ಲಾ ಅಧಿಕಾರಿ ಧರಣಿ ಸ್ಥಳಕ್ಕೆ ದೌಡಾಯಿಸಿದರು.

MLA Gooliihatti Shekhar Protest In Front Of The Excise Department Office

Recommended Video

ಇದನ್ನು ಬಳಸಿ corona ಇಂದ ದೂರ ಇರಿ | Oneindia Kannada

ಕೂಡಲೇ ಕೆಲಸ ಮಾಡಿ ಕೊಡುವುದಾಗಿ ಹೇಳಿ, ಅಬಕಾರಿ ಜಿಲ್ಲಾ ಅಧಿಕಾರಿ ನಾಗಶಯನ ಶಾಸಕರ ಬಳಿ ಕ್ಷಮೆ ಕೇಳಿದ್ದಾರೆ. ಅಧಿಕಾರಿ ಕ್ಷಮೆ ಕೇಳಿದ್ದರಿಂದ ಶಾಸಕ ಗೂಳಿಹಟ್ಟಿ ಶೇಖರ್ ಧರಣಿ ಕೈಬಿಟ್ಟರು. ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಧರಣಿ ಕುಳಿತುಕೊಳ್ಳುವ ಮೂಲಕ ಅಬಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

English summary
BJP MLA Goolihatti Shekhar Protest in front of the door of the excise office in Chitradurga city as the NOC was delayed to the MSIL Shop.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X