• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಗೆ ಕೊರೊನಾ ವೈರಸ್ ಪಾಸಿಟಿವ್

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಆಗಸ್ಟ್ 18: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

   Chitradurgaದ ವ್ಯಕ್ತಿ ಮೇಲೆ Corona Vaccine ಪ್ರಯೋಗ | Oneindia Kannada

   ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಕೋವಿಡ್‌ ಸೋಂಕು ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಕೋವಿಡ್‌ ಸೋಂಕು

   ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಶಾಸಕಿ, ನನ್ನ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಎಲ್ಲರೂ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಹಾಗೂ ನನ್ನ ಸಂಪರ್ಕದಲ್ಲಿರುವ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ.

   ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದ್ದು, ಶಾಸಕಿ ಅವರು ಕೊರೊನಾ ವೈರಸ್ ನಿಂದ ಬೇಗ ಗುಣಮುಖರಾಗಿ ಹೊರ ಬರುವಂತೆ ಸಂಸದ ಎ.ನಾರಾಯಣಸ್ವಾಮಿ, ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ.

   English summary
   Coronavirus positive has been confirmed for K. Poornima Srinivas, a MLA from Hiriyuru in Chitradurga district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X