ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
ಬೆಂಗಳೂರು, ಮಾರ್ಚ್ 29: ಬಿಜೆಪಿಯಲ್ಲಿ ಸದ್ಯಕ್ಕೆ ಸದ್ಯಕ್ಕೆ ಬಂಡಾಯ ತಣ್ಣಗಾಗುವಂತೆ ಕಾಣುತ್ತಿಲ್ಲ. ಒಬ್ಬರಾದ ಮೇಲೆ ಒಬ್ಬರು ಬಂಡಾಯ ಏಳುತ್ತಿದ್ದಾರೆ. ಇದೀಗ ಗೋವಿಂದ ಕಾರಜೋಳ ಅವರಿಗೆ ಚಿತ್ರದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಸ್ಥಳೀಯ ಬಿಜೆಪಿ ನಾಯಕರು 'ಗೋ ಬ್ಯಾಕ್ ಗೋವಿಂದ ಕಾರಜೋಳ' ಅಭಿಯಾನ ಆರಂಭಿಸಿದ್ದಾರೆ. ಪಕ್ಷೇತರ ಸ್ಪರ್ಧೆಗೆ ಮಾತುಗಳು ಕೇಳಿ ಬಂದಿವೆ.
ಬಾಕಿ ಉಳಿಸಿಕೊಂಡಿದ್ದ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಅನ್ನು ಬಿಜೆಪಿಯು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಘೋಷಿಸಿತು. ಈ ಕ್ಷೇತ್ರದಿಂದ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಅವರು ಟಕೆಟ್ ಆಕಾಂಕ್ಷಿಯಾಗಿದ್ದರು.

ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಸ್ಥಳೀಯ ಶಾಸಕ ಎಂ.ಚಂದ್ರಪ್ಪ ಅವರು, ಪಕ್ಷದ ನಾಯಕರು ತಮ್ಮ ತಿರ್ಮಾನ ಬದಲಿಸಬೇಕು. ಕ್ಷೇತ್ರದ ಟಿಕೆಟ್ ಅನ್ನು ಸ್ಥಳೀಯರಿಗೆ ನೀಡಬೇಕು. ಈಗಾಗಲೇ ಸ್ಥಳೀಯ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ. ವರಿಷ್ಠರು ನಿರ್ಧಾರ ಬದಲಿಸದಿದ್ದರೆ, ಇಲ್ಲಿಂದಲೇ ಪಕ್ಷೇತರವಾಗಿ ಕಣಕ್ಕಿಳಿಯುವುದು ಖಚಿತ. ಪಕ್ಷ ನನ್ನ ಮೇಲೆ ಯಾವುದೇ ಕ್ರಮ ಕೈಗೊಂಡರು ಎದುರಿಸಲು ಸಿದ್ಧ ಎಂದು ಅವರು ಹೇಳಿದರು.
ಪಕ್ಷೇತರ ಸ್ಪರ್ಧಿಸುವ ನಿಟ್ಟಿನಲ್ಲಿ ನಾಮಪತ್ರವನ್ನು ಏಪ್ರಿಲ್ 3ರಂದು ಸಲ್ಲಿಸಲು ತಿರ್ಮಾನಿಸಲಾಗಿದೆ. ಅಷ್ಟರೊಳಗೆ ನಾಯಕರ ಜೊತೆ ಚರ್ಚಿಸುತ್ತೇವೆ. ಬಿಜೆಪಿ ನಿರ್ಧಾರ ಹಿಂಪಡೆದು, ಸ್ಥಳೀಯರಿಗೆ ಟಿಕೆಟ್ ನೀಡಬೇಕು. ಇಲ್ಲವಾದರೆ ಪಕ್ಷೇತರವಾಗಿ ಅಖಾಡಕ್ಕೆ ಧುಮುಕಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಸ್ಥಳೀಯ ನಾಯಕರಲ್ಲಿ ಅಸಮಾಧಾನ
ಚಿತ್ರದುರ್ಗ ಸ್ಥಳೀಯ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದೇ ಬಾಗಲಕೋಟೆ ಜಿಲ್ಲೆಯ ಮುಧೋಳ ಭಾಗದ ಮಾಜಿ ಶಾಸಕ ಗೋವಿಂದ ಕಾರಜೋಳ ಅವರಿಗೆ ನೀಡಿದೆ. ಇದು ಸ್ಥಳೀಯರ ಬಿಜೆಪಿ ನಾಯಕರಲ್ಲಿ ಅಸಮಾಧಾನ ಹುಟ್ಟು ಹಾಕಿದೆ. ಶಾಸಕ ಎಂ.ಚಂದ್ರಪ್ಪ ಅವರು ಸಹ ಟಿಕೆಟ್ ಅಕಾಂಕ್ಷಿಯಾಗಿದ್ದು, ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಮಾಡದಿದ್ದರೆ ಪಕ್ಷೇತರವಾಗಿ ಕಣಕ್ಕಿಳಿಯಬೇಕಾಗುತ್ತದೆ ಎಂದು ಹೇಳಿದ್ದಾರೆ.

ಗೋಬ್ಯಾಕ್ ಅಭಿಯಾನ
ಶಾಸಕ ಎಂ. ಚಂದ್ರಪ್ಪ ಪುತ್ರ ರಘುಚಂದನ್ ನೇತೃತ್ವದಲ್ಲಿ ಬೆಂಬಲಿಗರ ಗೋ ಬ್ಯಾಕ್ ಅಭಿಯಾನ ಮತ್ತು ಪ್ರತಿಭಟನೆ ನಡೆಯಿತು. ಈ ವೇಳೆ ಮುಖಂಡರು, ಕಾರ್ಯಕರ್ತರು ಘೋಷಿತ ಅಭ್ಯರ್ಥಿಯನ್ನು ಬದಲಿಸಬೇಕು. ಸ್ಥಳೀಯ ನಾಯಕರಿಗೆ ಮನ್ನಣೆ ನಿಡಬೇಕು ಎಂದು ರಘುಚಂದನ್ ಆಗ್ರಹಿಸಿದರು.
ನಮಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಅಭಿಮಾನ, ಗೌರವವಿದೆ. ಆದರೆ ಅವರು ಕಾರ್ಯಕರ್ತರ ಭಾವನೆ ಅರಿತು ಅಭ್ಯರ್ಥಿಯನ್ನು ಬದಲಿಸಬೇಕು. ಈ ಕುರಿತು ಅವರೊಂದಿಗೆ ನಾವೆಲ್ಲರು ಚರ್ಚಿಸಲಿದ್ದೇವೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಅರ್ಹರು ಯಾರಿಲ್ಲವೇ?
ಉತ್ತರ ಕರ್ನಾಟಕ ಭಾಗದ ನಾಯಕರನ್ನು ತಂದು ಚಿತ್ರದುರ್ಗದಲ್ಲಿ ಕಣಕ್ಕಿಳಿಸಿದರೆ ಹೇಗೆ? ಇಲ್ಲಿನ ಅಭಿವೃದ್ಧಿ, ಕಾರ್ಯಕರ್ತರ ಕಷ್ಟಗಳಿಗೆ ಬೇರೆ ಕ್ಷೇತ್ರದ ಅಭ್ಯರ್ಥಿ ಸ್ಪಂದಿಸುತ್ತಾರೆಯೇ?. ಕ್ಷೇತ್ರದಲ್ಲಿ ಅರ್ಹರು ಯಾರು ಇರಲಿಲಿಲ್ಲವೇ? ಎಂದೆಲ್ಲ ಪ್ರಶ್ನೆ ಸ್ಥಳೀಯ ಬಿಜೆಪಿ ಮುಖಂಡರು ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ಹಾವೇರಿ ಟಿಕೆಟ್ ಮಿಸ್ ಆಗಿದ್ದಕ್ಕೆ ಬಿಜೆಪಿ ನಾಯಕರಾದ ಕೆ.ಎಸ್ ಈಶ್ವರಪ್ಪ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿವಿ ಸದಾನಂದಗೌಡರು, ತುಮಕೂರಿನಲ್ಲಿ ಮಾಧುಸ್ವಾಮಿ, ಕೊಪ್ಪಳದಲ್ಲಿ ಸಂಗಣ್ಣ ಕರಡಿ ಮತ್ತು ದಾವಣಗೆರೆಯಲ್ಲಿ ಜಿ.ಎಂ.ಸಿದ್ದೇಶ್ವರ ಬೆಂಬಲಿಗರು ಬಂಡಾಯವೆದ್ದಿದ್ದರು. ಬಹಿರಂಗವಾಗಿಯೇ ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications