ಚಿತ್ರದುರ್ಗ : ಭೀಕರ ರಸ್ತೆ ಅಪಘಾತ, ತಾಯಿ-ಮಗ ಸಾವು

ಚಿತ್ರದುರ್ಗ, ಡಿಸೆಂಬರ್ 17 : ಚಿತ್ರದುರ್ಗ ನಗರದ ಹೊರವಲಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತಾಯಿ, ಮಗ ಸೇರಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರನೊಬ್ಬರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿತ್ರದುರ್ಗ ನಗರದ ಹೊರವಲಯದ ಕ್ಯಾದಿಗೆರೆ ಸಮೀಪ ಭಾನುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಒಂದು ಬೈಕ್‌ನಲ್ಲಿದ್ದ ತಾಯಿ, ಮಗ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದ ಹಿಂಬದಿ ಸವಾರ ಸಹ ಸಾವನ್ನಪ್ಪಿದ್ದಾನೆ.

ಸಂಬಂಧಿಕರ ಮದುವೆ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಚಿತ್ರದುರ್ಗದ ಕಾಮನಬಾವಿ ನಿವಾಸಿಗಳಾದ ರಜಿಯಾ (50), ರಫಿಕ್ (44) ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದ ಸಿದ್ದು (25) ಸಹ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

accident

ಮತ್ತೊಬ್ಬ ಬೈಕ್ ಸವಾರ ಗಾಯಗೊಂಡಿದ್ದು, ಚಿತ್ರದುರ್ಗದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+