ಚಿತ್ರದುರ್ಗ: ಬೆಂಕಿ ಹಚ್ಚಿಕೊಂಡು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
ಚಿತ್ರದುರ್ಗ, ಮಾರ್ಚ್, 19: ಬೆಂಕಿ ಹಚ್ಚಿಕೊಂಡು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮಾರಕ್ಕ (24), ಮಕ್ಕಳಾದ ನಯನ್ (04), ಹರ್ಷವರ್ಧನ್ (02) ಮೃತರು ಎಂದು ಗುರುತಿಸಲಾಗಿದೆ.

ಬೇಲಿಗೆ ಬೆಂಕಿ ಹಚ್ಚಿ ಬೆಂಕಿಯಲ್ಲಿ ಮಕ್ಕಳನ್ನು ಹಾಕಿ ತಾಯಿಯೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಇದಕ್ಕೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ತಾಯಿ ಮತ್ತು ಮಕ್ಕಳ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಇನ್ನು ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಸದ್ಯ ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ: ಹೃದಯಾಘಾತದಿಂದ ಪತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ ಘಟನೆ ನವದೆಹಲಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಸೋಮವಾರ (ಫೆಬ್ರವರಿ 27) ರಾತ್ರಿ ನವದೆಹಲಿಯ ವೈಶಾಲಿಯ ಸೆಕ್ಟರ್ -3ರ ಅಹ್ಲ್ಕಾನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ 7ನೇ ಮಹಡಿಯ ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವದೆಹಲಿ ಮೃಗಾಲಯಕ್ಕೆ ಭೇಟಿ ನೀಡಿದಾಗ 25 ವರ್ಷದ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದ ನಂತರ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿತ್ತು.












Click it and Unblock the Notifications