ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮುರುಘಾ ಶರಣರು
ಚಿತ್ರದುರ್ಗ, ಅಕ್ಟೋಬರ್ 14: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಎಸ್‌ಕೆ ಬಸವರಾಜನ್ ಹಾಗೂ ಸೌಭಾಗ್ಯ ಚಿತಾವಣೆಯಿಂದ ಮುರುಘಾಶ್ರೀಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತರು ನೀಡಿದ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ಈಗಾಗಲೇ ಓರ್ವ ಬಾಲಕಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾಳೆ. ಹಾಗಾಗಿ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡುವಂತೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಈಗಾಗಲೇ ಇಬ್ಬರು ಬಾಲಕಿಯರುಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಮುರುಘಾ ಶ್ರೀ ಜೈಲು ಸೇರಿದ್ದಾರೆ. ಇದೀಗ ಮತ್ತೊಂದು ಸಂಕಷ್ಟದ ಎದುರಾಗಿದ್ದು, ಶ್ರೀಗಳ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಮತ್ತಿಬ್ಬರು ಬಾಲಕಿಯರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು, ಮೈಸೂರಿನ ನಜರಬಾದ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದೆ. ಮೈಸೂರು ಪೊಲೀಸರಿಂದ ಚಿತ್ರದುರ್ಗ ಠಾಣಾ ಪೊಲೀಸರು ಮಾಹಿತಿ ಪಡೆದುಕೊಳ್ಳುತ್ತಾರೆ. ಎಫ್ಐಆರ್ ಕಾಪಿ ತಂದು ಕೊಟ್ಟ ಬಳಿಕ ಚಿತ್ರದುರ್ಗದಲ್ಲಿ ಕೇಸ್ ದಾಖಲಾಗುತ್ತದೆ. ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ಧಾರೆ.
ಮುರುಘಾಶ್ರೀ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ಧಾರೆ. ಒಟ್ಟು 7 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೊದಲ ಪ್ರಕರಣದ ಐವರು ಸೇರಿ 7 ಮಂದಿ ಆರೋಪಿಗಳು , ಮೊದಲ ಕೇಸ್ 5 ಮಂದಿ ಸೇರಿ ಮತ್ತಿಬ್ಬರ ಮೇಲೆ ದೂರು ನೀಡಲಾಗಿದೆ. A-1 ಶಿವಮೂರ್ತಿ ಮುರುಘಾ ಶರಣರು, A-2 ವಾರ್ಡನ್ ರಶ್ಮಿ, A-3 ಬಸವಾದಿತ್ಯ, A-4 ಪರಮಶಿವಯ್ಯ, A-5 ಗಂಗಾಧರಯ್ಯ, A-6 ಮಹಾಲಿಂಗಯ್ಯ, A-7 ಕರಿಬಸಪ್ಪ ಮೇಲೆ ಎಫ್ಐಆರ್ ದಾಖಲಾಗಿದೆ.
ಇನ್ನೂ, ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳಿಗೆ ಬ್ರಹನ್ಮಠದ ವಿದ್ಯಾಪೀಠಕ್ಕೆ ಸೇರಿದ ಸಂಸ್ಥೆಗಳಿಗೆ ಸಂಬಂಧಿಸಿದ ಪವರ್ ಆಫ್ ಅಟಾರ್ನಿಯನ್ನು ಜೈಲಿನಿಂದಲೇ ಕಾರ್ಯಗತಗೊಳಿಸಲು ಹೈಕೋರ್ಟ್ ಇತ್ತೀಚೆಗೆ ಅನುಮತಿ ನೀಡಿದೆ.
ಮುರುಘಾಶ್ರೀಗಳು ಪವರ್ ಆಫ್ ಅಟಾರ್ನಿ ಕಾರ್ಯಗತಕ್ಕೆ ಅನುಮತಿ ನೀಡುವ ಸಂಬಂಧ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.












Click it and Unblock the Notifications