ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೊಲೀಸ್ ಕಸ್ಟಡಿಗೆ ಮುರುಘಾ ಶರಣರು: ಬಸವರಾಜನ್ ವಿರುದ್ಧ ಧಿಕ್ಕಾರ ಕೂಗಿದ ಮುರುಘಾ ಮಠದ ಭಕ್ತರು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್ 2: ವಸತಿ ನಿಲಯದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಶರಣರ ಪರ ಮಠದ ಭಕ್ತಾಧಿಗಳು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಮುಂದೆ ಮುಂದೆ ಆಗಮಿಸಿ ಸ್ವಾಮೀಜಿ ನಿರಪರಾಧಿ , ಇದೆಲ್ಲಾ ಅವರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯಾಯಾದೀಶರ ಸೂಚನೆಯ ಮೇಲೆ ಶುಕ್ರವಾರ ಕೋರ್ಟ್‌ಗೆ ಮುರುಘಾ ಶರಣರನ್ನು ಹಾಜರುಪಡಿಸಲಾಗಿತ್ತು. ಆನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿದ್ದರೂ ಅಲ್ಲಿಂದಲೇ ನೇರವಾಗಿ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಅವರನ್ನು 3 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಿತ್ತು.

Breaking:ಮುರುಘಾ ಶರಣರನ್ನು 4 ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದ ಕೋರ್ಟ್‌Breaking:ಮುರುಘಾ ಶರಣರನ್ನು 4 ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದ ಕೋರ್ಟ್‌

ಆನಾರೋಗ್ಯದ ಕಾರಣ ಕೋರ್ಟ್‌ ಆವರಣದಲ್ಲಿ ಸ್ವಾಮೀಜಿ ಕುಸಿದು ಬಿದ್ದಿದ್ದರು. ನಂತರ ಅವರನ್ನು ಕೋರ್ಟ್‌ನಿಂದ ನೇರವಾಗಿ ಮತ್ತೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ವೇಳೆ ಆಸ್ಪತ್ರೆ ಮುಂದೆ ಧಾವಿಸಿದ್ದ ನೂರಾರು ಮಠದ ಭಕ್ತರು ಸ್ವಾಮೀಜಿ ಪರ ಜೈಕಾರ ಹಾಕಿದರು.

Murugha Mutt Followers Protest against SK Basavarajan

ಮುರುಘಾ ಶರಣರಿಗೆ ಜಯವಾಗಲಿ, ಅವರು ನಿರಪರಾಧಿ, ಅವರ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಈ ಪ್ರಕರಣವನ್ನು ನಾವು ಗೆದ್ದೆ ಗೆಲ್ಲುತ್ತೇವೆ ಎಂದ ಅವರು , ಮಠದ ಅನ್ನ ತಿಂದು ದ್ರೋಹ ಮಾಡಿದವರಿಗೆ ಧಿಕ್ಕಾರ , ಎಂದು ಮಾಜಿ ಆಡಳಿತಾಧಿಕಾರಿ ಎಸ್‌ಕೆ ಬಸವರಾಜನ್ ವಿರುದ್ಧ ಆಕ್ರೋಶ ಹೊರ ಹಾಕಿದರು.

Murugha Mutt Followers Protest against SK Basavarajan

ವಾರ್ಡನ್ ರಶ್ಮಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಮುರುಘಾ ಮಠದ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣದ ಎರಡನೇ ಆರೋಪಿಯಾಗಿರುವ ವಾರ್ಡನ್ ರಶ್ಮಿಗೆ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಚಿತ್ರದುರ್ಗ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರು ಈ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿ ಮಹಿಳಾ ಕಾರಾಗೃಹ ಇಲ್ಲದ ಕಾರಣ ಅವರನ್ನು ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆ ಮಾಡಲಾಗುತ್ತಿದೆ.

English summary
Following the Chitradurga District Court Sending Murugha Shree to 3 days of Police Custody, devotees of Mutt protested against the former administrator SK Basavarajan,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X