Murugha Mutt Swamiji: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಶ್ರೀ ನಿರಪರಾಧಿ ಎಂದು ಕೋರ್ಟ್ ತೀರ್ಪು
Murugha Mutt Seer: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠ ಶ್ರೀಗೆ ಬಿಗ್ ರಿಲೀಪ್ ಸಿಕ್ಕಿದೆ. ಶಿವಮೂರ್ತಿ ಸ್ವಾಮೀಜಿ ನಿರಪರಾಧಿ ಎಂದು ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಆದೇಶ ಹೊರಡಿಸಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಇವತ್ತಿಗೆ ತೀರ್ಪನ್ನು ಕಾಯ್ದಿರಿಸಿತ್ತು.
ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
2022ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

3 ವರ್ಷಗಳ ಸುದೀರ್ಘ ತನಿಖೆ ನಂತರ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ನಿರ್ದೋಷಿ ಎಂದು ತೀರ್ಪು ನೀಡಿದೆ. ಜೊತೆಗೆ ಮೊದಲ ಪ್ರಕರಣ ಖುಲಾಸೆ ಆಗಿದೆ.ಚಿತ್ರದುರ್ಗ ಮುರುಘಾ ಶ್ರೀ ಪೋಕ್ಸೋ ಪ್ರಕರಣ ಇಡೀ ದೇಶಾದ್ಯಂತ ಸದ್ದು ಮಾಡಿತ್ತು. ಇದೀಗ ಅವರು ನಿರಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.
ಪ್ರಕಟರಣದ ಹಿನ್ನೆಲೆ: ಚಿತ್ರದುರ್ಗ ಮುರುಘಾ ಶ್ರೀ ವಿರುದ್ಧ 2022ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಕೇಸ್‌ನಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಅದೇ ವರ್ಷ ಆಗಸ್ಟ್ 27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಪ್ರಕರಣ ವರ್ಗಾವಣೆ ಆಗಿದ್ದು, 2022ರ ಸೆಪ್ಟೆಂಬರ್ 1ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೆ ಒಳಗಾಗಿದ್ದರು. ನಂತರ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅಕ್ಟೋಬರ್ 13ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಸಹ ಉಲ್ಲೇಖ ಮಾಡಿದ್ದರು.
ಈ ವೇಳೆ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆ ಭಟ್ಟ ಕರಿಬಸಪ್ಪ ವಿರುದ್ದ ಪ್ರಕರಣ ದಾಖಲಾಗಿತ್ತು. ಸಂಪೂರ್ಣ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡ 2022ರ ಅಕ್ಟೋಬರ್ 27ರಂದು 694 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಅದರಲ್ಲಿ 347 ಪುಟಗಳ ಎ ಮತ್ತು ಬಿ ಎಂದು ಎರಡು ಸೆಟ್ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು.
2023ರ ಜನವರಿ10ಕ್ಕೆ ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು. ಇಷ್ಟೆಲ್ಲ ಸಾಕ್ಷ್ಯಾಧಾರ ಹಾಗೂ ಚಾರ್ಜ್‌ಶೀಟ್ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡೆಯುವಾಗಲೇ 2023ರ ನವೆಂಬರ್ 8ರಂದು ಹೈಕೋರ್ಟ್‌ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನವೆಂಬರ್ 16ರಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ ಆಗಿದ್ದರು.
2ನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆಯದ ಹಿನ್ನೆಲೆ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಆದೇಶ ಹಿನ್ನೆಲೆ ಪುನಃ ನವೆಂಬರ್ 20ರಂದು ಮಧ್ಯಾಹ್ನ ಮುರುಘಾಶ್ರೀ ಮತ್ತೆ ಬಂಧನಕ್ಕೆ ಒಳಗಾದರು. ನಂತರ ಅವರನ್ನ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆಗ ನವೆಂಬರ್ 20ರ ಸಂಜೆ ವೇಳೆಗೆ ಹೈಕೋರ್ಟ್ ಸೂಚನೆ ಮೇರೆಗೆ ಅಂದು ಬಿಡುಗಡೆಯಾಗಿದ್ದರು.
ಆಗ ಸಂತ್ರಸ್ತೆಯರು ಮುರುಘಾ ಶ್ರೀಗಳ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆ ಮುಖ್ಯ ಸಾಕ್ಷಿ ವಿಚಾರಣೆ ಪೂರ್ಣ ಆಗುವವರೆಗೂ ಮುರುಘಾಶ್ರೀ ಬಂಧನದಲ್ಲಿ ಇಡುವಂತೆ ಸುಪ್ರಿಂ ಆದೇಶ ಹೊರಡಿಸಿತ್ತು. ಆದ್ದರಿಂದ 2024ರ ಮೇ 27ರಂದು ಕೋರ್ಟ್ ಎದುರು ಶರಣಾದ ಮುರುಘಾ ಮಠ ಸ್ವಾಮಿಜಿಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿತ್ತು. ನಂತರ ಸಂತ್ರಸ್ತೆಯರಿಬ್ಬರು ಸೇರಿ 13 ಜನರ ಸಾಕ್ಷಿ ವಿಚಾರಣೆ ಅಂತ್ಯಗೊಂಡ ಹಿನ್ನೆಲೆ ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ ದೊರೆದಿತ್ತು.












Click it and Unblock the Notifications