ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಸೆ.14ಕ್ಕೆ ಮುಂದೂಡಿಕೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಸೆಪ್ಟೆಂಬರ್ 13: ಮಠದ ವಸತಿನಿಲಯದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಬುಧವಾರಕ್ಕೆ ಮುಂದೂಡಲಾಗಿದೆ.

ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಶಿವಮೂರ್ತಿ ಶರಣರು ಫೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೆಪ್ಟೆಂಬರ್ 14(ನಾಳೆ)ಕ್ಕೆ ನ್ಯಾಯಾಂಗ ಬಂಧನ ಮುಕ್ತಾಯವಾಗಲಿದೆ. ಬುಧವಾರ ಜಾಮೀನು ಸಿಗಲಿದೆಯೇ ಅಥವಾ ಬಂಧನದಲ್ಲೇ ಇರಬೇಕಾಗಬಹುದಾ ಎನ್ನುವುದು ತಿಳಿಯಲಿದೆ.

Murugha Shree : ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ Murugha Shree : ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಮುರುಘಾ ಶ್ರೀ ಜಾಮೀನಿಗೆ ಬುಧವಾರ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲ್ಲಿಸುವ ಸಾಧ್ಯತೆ ಇದೆ. ಪೋಕ್ಸೋ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಪರಮಶಿವಯ್ಯ ಮತ್ತು ಬಸವಾದಿತ್ಯ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯೂ ಕೂಡ ಬುಧವಾರಕ್ಕೆ ಮುಂದೂಡಲಾಗಿದೆ.

Murugha Seer POCSO Case:Court Postpones Hearing of Bail Plea to Tomorrow

ಜಯದೇವಾ ಆಸ್ಪತ್ರೆಗೆ ದಾಖಲಾಗಲು ಮನವಿ

ಹೃದಯ ಸಂಬಂಧಿ ಖಾಯಿಲೆ ಇರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲು ಮುರುಘಾಶ್ರೀ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡುವ ಸಾಧ್ಯತೆಯಿದೆ. ಈಗಾಗಲೇ ಸಮೀಪದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಸೂಚಿಸಿತ್ತು. ಇದೀಗ ಎಂಜೋಗ್ರಾಮ್ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್​​ಗೆ ಮಾಡುವಂತೆ ಮನವಿ ಮಾಡಲಾಗಿದ್ದು, ಆಸ್ಪತ್ರೆಗೆ ಶಿಫ್ಟ್ ಬಗ್ಗೆಯೂ ಬುಧವಾರ ಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ. ಮುರುಘಾಶ್ರೀ ಆರೋಗ್ಯ ವರದಿಗಳ ಆಧಾರದ ಮೇಲೆ ಕೋರ್ಟ್ ಸೂಚನೆ ನೀಡುವ ಸಾಧ್ಯತೆಯಿದೆ.

ಸೆಪ್ಟೆಂಬರ್ 7ರಂದು ಸ್ವಾಮೀಜಿಗೆ ಹೃದಯ ಸಂಬಂಧಿ ಸಮಸ್ಸೆ ಬಗ್ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಸೇರಿಸಲು ಮನವಿ ಮಾಡಲಾಗಿತ್ತು. ಇದಕ್ಕೆ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು

ಪೋಕ್ಸೋ ಪ್ರಕರಣದ ನ್ಯಾಯಾಂಗ ಬಂಧನದಲ್ಲಿರುವ 2ನೇ ಆರೋಪಿ ಹಾಸ್ಟಲ್ ವಾರ್ಡನ್ ರಶ್ಮಿ ಜಾಮೀನು ಅರ್ಜಿ ವಿಚಾರಣೆ ಕೂಡ ಸೆಪ್ಟೆಂಬರ್ 14ರಂದು ನಡೆಯಲಿದೆ.

English summary
Murugha Seer POCSO case: Hearing of the bail petition submitted by Shivamurthy Murugha seer in POCSO case, has been postponed to September 14 by Chitradurga district sessions court on tuesday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X