Breaking: ಪೋಕ್ಸೋ ಪ್ರಕರಣ: ಮುರುಘಾ ಶರಣರ ನ್ಯಾಯಾಂಗ ಬಂಧನ ಸೆ.27ರ ತನಕ ವಿಸ್ತರಣೆ

ಚಿತ್ರದುರ್ಗ, ಸೆಪ್ಟೆಂಬರ್ 14: ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್‌ ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿದೆ.

ಬುಧವಾರದಂದು ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅಂತ್ಯವಾಗಿದ್ದರಿಂದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಇದೀಗ ಮತ್ತೆ ಸೆಪ್ಟಂಬರ್ 14 ದಿನಗಳ ಕಾಲ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ.

Murugha Shree Pocso Case : Shivamurthy Sharanaru Juridical Custody Extended till September 27

ಇನ್ನು ಪ್ರಕರಣದ ಎ2 ಆರೋಪಿ ಹಾಸ್ಟೆಲ್ ವಾರ್ಡನ್‌ ರಶ್ಮಿ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಸೆಪ್ಟೆಂಬರ್ 27ರವರೆಗೆ ವಿಸ್ತರಣೆ ಮಾಡಿದೆ. ಈ ಪ್ರಕರಣದ 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರಾಬಾದ್‌ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯರು ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದರು. ಏಳು ದಿನದ ಬಳಿಕ ಮುರುಘಾ ಶ್ರೀಯನ್ನು ಪೊಲೀಸರು ಬಂಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+