ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking news; ಚಿತ್ರದುರ್ಗದಲ್ಲಿ ಎಎಸ್ಐ ಆತ್ಮಹತ್ಯೆಗೆ ಶರಣು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಅಕ್ಟೋಬರ್ 03; ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆಯ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಮೃತಪಟ್ಟವರನ್ನು ಎಎಸ್‌ಐ ಗುರುಮೂರ್ತಿ (50) ಎಂದು ಗುರುತಿಸಲಾಗಿದೆ. ಭಾನುವಾರ ಗುರುಮೂರ್ತಿ ಅವರ ಶವ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಡಿ. ಕೆ. ರವಿ ಆತ್ಮಹತ್ಯೆ; ಸಿದ್ದರಾಮಯ್ಯ ಹೇಳಿದ ಸಂಗತಿಗಳು! ಡಿ. ಕೆ. ರವಿ ಆತ್ಮಹತ್ಯೆ; ಸಿದ್ದರಾಮಯ್ಯ ಹೇಳಿದ ಸಂಗತಿಗಳು!

ಗುರುಮೂರ್ತಿ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹಿರಿಯೂರು ತಾಲ್ಲೂಕಿನ ಐಮಂಗಲದಲ್ಲಿ ಐಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತೀಚಿಗೆ ಎಎಸ್‌ಐ ಆಗಿ ಬಡ್ತಿ ಪಡೆದಿದ್ದರು.

ಸಾಮೂಹಿಕ ಆತ್ಮಹತ್ಯೆ ಪ್ರಕರಣ; ಪತ್ರಕರ್ತ ಹಲ್ಲೆಗೆರೆ ಶಂಕರ್ ಬಂಧನ ಸಾಮೂಹಿಕ ಆತ್ಮಹತ್ಯೆ ಪ್ರಕರಣ; ಪತ್ರಕರ್ತ ಹಲ್ಲೆಗೆರೆ ಶಂಕರ್ ಬಂಧನ

 Nayakanahatti Police Station ASI Commits Suicide

ಶನಿವಾರ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನೆ ಬಂದೋಬಸ್ತ್‌ಗೆ ಅವರೇ ಮನವಿ ಮಾಡಿ ನಿಯೋಜನೆಗೊಂಡಿದ್ದರು. ಆದರೆ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಎಂಬ ಮಾಹಿತಿ ಇದೆ.

ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮಹಿಳೆಯ ಜೊತೆ ಅಕ್ರಮ ಸಂಬಂಧದ ವಿಚಾರದ ಪತ್ನಿಯ ಜೊತೆ ಶನಿವಾರ ಮನೆಯಲ್ಲಿ ಜಗಳವಾಡಿದ್ದರು. ಬಳಿಕ ತೀವ್ರವಾಗಿ ಬೇಸರಗೊಂಡಿದ್ದರು ಎಂಬ ಮಾಹಿತಿ ಸಿಕ್ಕಿದೆ. ಬಳಿಕ ಕರ್ತವ್ಯಕ್ಕೂ ಹಾಜರಾಗಿರಲಿಲ್ಲ.

ಚಿತ್ರದುರ್ಗ ತಾಲ್ಲೂಕಿನ ದಂಡಿನ ಕುರುಬರಹಟ್ಟಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಬೈಕ್ ಸಹ ಪತ್ತೆಯಾಗಿದೆ.

ಚಿತ್ರದುರ್ಗ ಎಸ್ಪಿ ರಾಧಿಕಾ ಗುರುಮೂರ್ತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ‌. ಚಿತ್ರದುರ್ಗ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಹಾಯವಾಣಿ; ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಸ್ಥಾಪನೆ ಮಾಡಲಾಗಿದೆ. ದೂರವಾಣಿ ಸಂಖ್ಯೆ 080 - 25497777.

Recommended Video

RCB ಪರವಾಗಿ ತೀರ್ಪು ನೀಡಿದ Umpire ಗೆ ಮಂಗಳಾರತಿ | Oneindia Kannada

English summary
Gurumurthy (50) assistant sub inspector of the Nayakanahatti police station of the Challakere taluk of Chitradurga district committed suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X