Nayakanahatti Thipperudra Swamy : ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ: ಭಕ್ತರಿಗಾಗಿ ಇಲ್ಲಿದೆ ಮಾಹಿತಿ
ಮಾರ್ಚ್ 3 ರಿಂದ ಆರಂಭಗೊಂಡಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ 13ರವರೆಗೆ ನಡೆಯಲಿದ್ದು, ಮಾರ್ಚ್ 10 ರಂದು ಜರುಗುವ ದೊಡ್ಡ ರಥೋತ್ಸವಕ್ಕೆ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ವಿವಿಧಡೆಗಳಿಂದ ಸುಮಾರು 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಭಾಗಿ.
ಚಿತ್ರದುರ್ಗ, ಮಾರ್ಚ್ 8: ಮಾಡಿದಷ್ಟು ನೀಡು ಭಿಕ್ಷೆ ಮಂತ್ರದ ಶ್ರೀಗುರು ತಿಪ್ಪೇರುದ್ರಸ್ವಾಮಿಯ ಬ್ರಹ್ಮರಥೋತ್ಸವ ಮಾರ್ಚ್ 10ರಂದು ನಡೆಯಲಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಗ್ರಾಮದ ಶ್ರೀಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಮೂಲ ಸೌಕರ್ಯಕ್ಕೆ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಿದ್ದಾರೆ.
ಮಾರ್ಚ್ 3 ರಿಂದ ಆರಂಭಗೊಂಡಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ 13ರವರೆಗೆ ನಡೆಯಲಿದ್ದು, ಮಾರ್ಚ್ 10 ರಂದು ಜರುಗುವ ದೊಡ್ಡ ರಥೋತ್ಸವಕ್ಕೆ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ವಿವಿಧಡೆಗಳಿಂದ ಸುಮಾರು 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಭಾಗಿಯಾಗುವ ಸಾಧ್ಯತೆ ಇದೆ.

ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರ ಬಳಕೆ ಹಾಗೂ ಕುಡಿಯವ ನೀರು ಸರಬರಾಜು ಮಾಡಲು 40 ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. 6 ಕಡೆಗಳಲ್ಲಿ ಬೋರ್ ವೆಲ್‍ಗಳನ್ನು ಗುರುತಿಸಲಾಗಿದೆ. ನಾಯಕನಟ್ಟಿ ಪಟ್ಟಣದ 5 ಕಡೆ ತಾತ್ಕಾಲಿಕವಾಗಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಕ್ರಮ ವಹಿಸಲಾಗಿದೆ. ಇದರೊಂದಿಗೆ ಜಾತ್ರಾ ಮಹೋತ್ಸವ ಜರುಗುವ ದಿನಗಳಂದು ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಿಸಲು ಸೂಚಿಸಲಾಗಿದೆ.
ಮಾರ್ಚ್ 10ರ ಬ್ರಹ್ಮರಥೋತ್ಸವಕ್ಕೆ ಸಕಲ ಸಿದ್ಧತೆ
ಜಾತ್ರ ಮಹೋತ್ಸವದ ಅಂಗವಾಗಿ ಆರೋಗ್ಯ ಇಲಾಖೆಯಿಂದ 152 ಆರೋಗ್ಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಇದರಲ್ಲಿ 16 ಜನರ ವೈದ್ಯಾಧಿಕಾರಿಗಳು ಇರಲಿದ್ದಾರೆ. 4 ಕಡೆ ತಾತ್ಕಾಲಿಕವಾಗಿ ಕ್ಲಿನಿಕ್‌ಗಳನ್ನು ತೆರಯಲಾಗುವುದು. ಆಹಾರ ಹಾಗೂ ನೈರ್ಮಲ್ಯ ಮೇಲ್ವಿಚಾರಣೆಗಾಗಿ 8 ತಂಡಗಳು, ತುರ್ತು ಸೇವೆಗಳಿಗಾಗಿ 4 ಆಂಬ್ಯುಲೆನ್ಸ್, ಕೋವಿಡ್ ಲಸಿಕಾ ಕೇಂದ್ರ ಹಾಗೂ ಆರೋಗ್ಯ ಇಲಾಖೆ ಶಿಕ್ಷಣ, ಮಾಹಿತಿ ಸಂವಹನ ಮಳಿಗೆಯನ್ನು ಜಾತ್ರೆಯಲ್ಲಿ ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಸಭೆಯಲ್ಲಿ ಮಾಹಿತಿ ನೀಡಿದರು.
ಜಾತ್ರಾ ಮಹೋತ್ಸವದ ಬಂದೋಬಸ್ತ್‍ಗಾಗಿ 2,550 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಯಾವುದೇ ಅಹಿತಕರ ಘಟನೆ, ಕಳ್ಳತನ ಸಂಭವಿಸದಂತೆ ತಡೆಯಲು ಪಟ್ಟಣದ 30 ಕಡೆ ಸಿಸಿ ಟಿವಿ ಕ್ಯಾಮರಾ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. 3 ಕಡೆ ವಾಚ್ ಟವರ್, 22 ಕಡೆ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಾರ್ಚ್ 10 ರಂದು ಜರುಗುವ ದೊಡ್ಡ ರಥೋತ್ಸವಕ್ಕೂ ಮುನ್ನ ಜರುಗವ ಮುಕ್ತಿ ಬಾವುಟ ಹರಾಜಿನಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಕೊಳ್ಳಬೇಕು. ನೊಂದಣಿ ಸಮಯದಲ್ಲಿ ಬ್ಯಾಂಕ್ ಚೆಕ್‌ಬುಕ್ ಹಾಳೆಯೊಂದನ್ನು ದೇವಸ್ಥಾನದ ಸಮಿತಿಗೆ ನೀಡಬೇಕು. ಹರಾಜು ಕೂಗಿ ಮುಕ್ತಿ ಬಾವುಟ ಪಡೆದವರು ಮೂರು ತಿಂಗಳ ಒಳಗಾಗಿ ಹಣ ಸಂದಾಯ ಮಾಡುವಂತೆ ನಿಯಮಗಳನ್ನು ರೂಪಿಸಲಾಗಿದೆ.
ಜಾತ್ರಾ ಮಹೋತ್ಸವದಲ್ಲಿ ಪ್ರಾಣಿಬಲಿ ನಿಷೇಧ
ಜಾತ್ರಾ ಮಹೋತ್ಸವದಲ್ಲಿ ಕಡ್ಡಾಯವಾಗಿ ಪ್ರಾಣಿಬಲಿಯಂತಹ ಆಚರಣೆಗಳನ್ನು ನಿಷೇಧಿಸಲಾಗಿದೆ. ಪೊಲೀಸ್, ಪಟ್ಟಣ ಪಂಚಾಯತಿ ಹಾಗೂ ಪಶು ಇಲಾಖೆ ಅಧಿಕಾರಿಗಳು ಸನ್ನದ್ದವಾಗಿದ್ದು, ಪ್ರಾಣಿಬಲಿ ನೀಡುವುದನ್ನು ತಡೆಗಟ್ಟಬೇಕು ಎನ್ನಲಾಗಿದೆ.
12ನೇ ಶತಮಾನದ ನಂತರ ಕಾಯಕ ತತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಶ್ರೀಗುರು ತಿಪ್ಪೇರುದ್ರಸ್ವಾಮಿ, ಆಂಧ್ರದ ರಾಯದುರ್ಗದ ಕಡೆಯಿಂದ ಮೊಳಕಾಲ್ಮುರು ಬಳಿ ಬಂದು ಪವಾಡ ಮಾಡಿ, ಬಿಸಿ ನೀರು ಚಿಲುಮೆ ಸೃಷ್ಟಿಸಿದರು. ನಂತರ ಪಾವಗಡದ ಬಳಿಯ ವದನಕಲ್ಲು ಗ್ರಾಮದ ಮಾರ್ಗವಾಗಿ ಭಕ್ತ ಫಣಿಯಪ್ಪನೊಂದಿಗೆ ಇಲ್ಲಿಗೆ ಬಂದು ನೆಲೆಸಿದರು ಎಂದು ಹೇಳಲಾಗಿದೆ.












Click it and Unblock the Notifications