ಚಿತ್ರದುರ್ಗದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕರ್ತವ್ಯ ಲೋಪ
ಚಿತ್ರದುರ್ಗ, ಜುಲೈ 22: ಕೊರೊನಾ ವೈರಸ್ ಪಾಸಿಟಿವ್ ವ್ಯಕ್ತಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸದೆ ಆರೋಗ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
Recommended Video
ಕೊರೊನಾ ಸೋಂಕು ದೃಢವಾದ ವ್ಯಕ್ತಿಗೆ ಚಿಕಿತ್ಸೆ ಸಿಗದೆ ಮನೆಯಲ್ಲಿಯೇ ನರಳಾಟ ಅನುಭವಿಸಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 13 ರಂದು ಕೊರೊನಾ ವೈರಸ್ ಪರೀಕ್ಷೆ ಮಾಡಿಸಿದ್ದ 33 ವರ್ಷದ ವ್ಯಕ್ತಿಗೆ ನಿನ್ನೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಚಿತ್ರದುರ್ಗದ ನೆಹರೂ ನಗರದ ಮನೆಯಲ್ಲಿ ವಾಸವಿರುವ ಸೋಂಕಿತ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಸೋಂಕಿತ ವ್ಯಕ್ತಿಯು ಮನೆಯ ಕೊಠಡಿಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ ಎನ್ನಲಾಗಿದೆ.

ವ್ಯಕ್ತಿಗೆ ಕೊರೊನಾ ಸೋಂಕು ದೃಢವಾದ ಬಳಿಕ ಅಧಿಕಾರಿಗಳು ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ ಡೌನ್ ಮಾಡಿದ್ದು, ನಗರಸಭೆಯಿಂದ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲು ಕುಟುಂಬಸ್ಥರು ಮನವಿ ಮಾಡಿದ್ದಾರೆ. ಇದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಉಸ್ತುವಾರಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಬಂದಿದ್ದರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.












Click it and Unblock the Notifications