ಚಿತ್ರದುರ್ಗದಲ್ಲಿ ಇಂದು 125 ಜನರಿಗೆ ಕೊರೊನಾ ಸೋಂಕು ಪತ್ತೆ

ಚಿತ್ರದುರ್ಗ, ಆಗಸ್ಟ್ 27: ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 125 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2331 ಕ್ಕೆ ಏರಿಕೆಯಾದಂತಾಗಿದೆ.

Recommended Video

      Fixed Deposit ಮೇಲಿನ ಬಡ್ಡಿ ದರ ಇಳಿಕೆ ಮಾಡಿದ HDFC Bank | Oneindia Kannada

      ಚಿತ್ರದುರ್ಗ ತಾಲ್ಲೂಕಿನಲ್ಲಿ 24, ಹಿರಿಯೂರು-47, ಚಳ್ಳಕೆರೆ-27, ಮೊಳಕಾಲ್ಮೂರು 20, ಹೊಸದುರ್ಗ 5 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 2 ಸೇರಿದಂತೆ ಒಟ್ಟು 125 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಒಟ್ಟು 765 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು.

      ಇದುವರೆಗೆ ಜಿಲ್ಲೆಯಲ್ಲಿ 34 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1562 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 734 ಸಕ್ರಿಯ ಪ್ರಕರಣಗಳು ಇವೆ.

      New 125 Coronavirus Infection Cases Reported In Chitradurga District

      ಸದ್ಯ ಜಿಲ್ಲೆಯಲ್ಲಿ ಒಟ್ಟು 562 ಕಂಟೈನ್ಮೆಂಟ್ ವಲಯಗಳಿದ್ದು, ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 16,696 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

      ಈವರೆಗೆ 35,774 ಜನರ ಮಾದರಿ ಸಂಗ್ರಹಿಸಲಾಗಿದ್ದು, 32,344 ಜನರ ವರದಿ ನೆಗೆಟಿವ್ ಬಂದಿದೆ, ಉಳಿದ 681 ಜನರ ವರದಿ ಬರುವುದು ಬಾಕಿ ಇದೆ. 418 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+