• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗದಲ್ಲಿ 213 ಜನರಿಗೆ ಕೋವಿಡ್ ಸೋಂಕು ದೃಢ: 3,258ಕ್ಕೆ ಏರಿಕೆ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಸೆಪ್ಟೆಂಬರ್ 3: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 213 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,258ಕ್ಕೆ ಏರಿಕೆಯಾಗಿದೆ.

   The Rock ಕುಟುಂಬಕ್ಕೂ ಕೂಡ ಕೊರೊನ ತಗುಲಿತ್ತು | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಚಿತ್ರದುರ್ಗ ತಾಲ್ಲೂಕಿನಲ್ಲಿ 70, ಹಿರಿಯೂರು-17, ಚಳ್ಳಕೆರೆ-50, ಮೊಳಕಾಲ್ಮೂರು 37, ಹೊಸದುರ್ಗ 11 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 28 ಸೇರಿದಂತೆ ಒಟ್ಟು 213 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

   ಭಾರತದಲ್ಲಿ 83,883 ಕೊರೊನಾ ಸೋಂಕಿತರು ಪತ್ತೆ, 1,043 ಮಂದಿ ಸಾವು

   ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕೋವಿಡ್ ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 15 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 863 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು.

   ಚಿತ್ರದುರ್ಗ ಜಿಲ್ಲೆಯಲ್ಲಿ ಇದುವರೆಗೆ 35 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1,783 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,440 ಸಕ್ರಿಯ ಪ್ರಕರಣಗಳಿವೆ.

   ಸದ್ಯ ಜಿಲ್ಲೆಯಲ್ಲಿ ಒಟ್ಟು 708 ಕಂಟೈನ್ಮೆಂಟ್ ವಲಯಗಳಿದ್ದು, ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 24,674 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

   ಈವರೆಗೆ 40,342 ಜನರ ಮಾದರಿ ಸಂಗ್ರಹಿಸಲಾಗಿದ್ದು, 35,527 ಜನರ ವರದಿ ನೆಗೆಟಿವ್ ಬಂದಿದೆ, ಉಳಿದ 1122 ಜನರ ವರದಿ ಬರುವುದು ಬಾಕಿ ಇದೆ. 435 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

   English summary
   Wednesday's report for Covid-19 in Chitradurga district confirmed 213 people were Coronavirus infected, resulting in a total of 3,258 cases.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X